Karnataka Rain: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ, 7 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ಧಾರವಾರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಚಿಂತಾಮಣಿ, ಮಂಗಳೂರು, ಬೆಂಗಳೂರು, ಹಾವೇರಿ, ಹೊಳೆ ಹೊನ್ನೂರು, ಹುಣಸೂರು, ಮುಲ್ಕಿ, ಶಿರಾಲಿ, ರಾಣೆಬೆನ್ನೂರು, ಲಕ್ಷ್ಮೇಶ್ವರ, ಬೆಳ್ಳಟ್ಟಿ, ಅಣ್ಣಿಗೆರೆ, ರಾಯಲ್ಪಾಡು, ಸುಬ್ರಹ್ಮಣ್ಯ, ಮಂಕಿ, ಸವಣೂರು, ಶಿರಹಟ್ಟಿ, ಕೋಲಾರ, ಹೊಸದುರ್ಗ, ಹೊನ್ನಾಳಿ, ಶಿಡ್ಲಘಟ್ಟ, ದೊಡ್ಡಬಳ್ಳಾಪುರದಲ್ಲಿ ಮಳೆಯಾಗಿದೆ.
ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Bengaluru Rain: ಬೆಂಗಳೂರಿನಲ್ಲಿ ಮಳೆ, ಹಲವಡೆ ಟ್ರಾಫಿಕ್ ಜಾಮ್ ಅಂಡರ್ ಪಾಸ್ ಬಂದ್
ಕಳೆದ ವಾರ ಗುಜರಾತ್ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ ಬಿಪೋರ್ಜಾಯ್ ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಪ್ರಗತಿಯ ಮೇಲೆ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಜೂನ್ 1 ರಿಂದ ಕರ್ನಾಟಕದಲ್ಲಿ ಇದುವರೆಗೆ 34.3 ಮಿಮೀ ಮಳೆಯಾಗಿದ್ದು, ಸಾಮಾನ್ಯ ಮಳೆಯ 119.6 ಮಿಮೀ ವಿರುದ್ಧ ಶೇ 71 ರಷ್ಟು ಕೊರತೆಯಾಗಿದೆ.
ಹವಾಮಾನ ತಜ್ಞರ ಪ್ರಕಾರ, ಬಿಪರ್‌ಜಾಯ್ ದಕ್ಷಿಣ ಭಾರತದಿಂದ ತೇವಾಂಶವನ್ನು ಹೀರಿಕೊಂಡು ಈ ಕೊರತೆಯನ್ನು ಉಂಟುಮಾಡಿದೆ. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯ 49 ಸೆಂ.ಮೀ (ಶೇ 72 ನಷ್ಟು ಕೊರತೆ) ಗಳಿಗೆ ಹೋಲಿಸಿದರೆ 13 ಸೆಮೀ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಕೇವಲ 2 ಸೆಂ.ಮೀ (ಸಾಮಾನ್ಯ 7 ಸೆಂ.ಮೀ), ಶೇ 68 ರಷ್ಟು ಮಳೆ ಕೊರತೆಯಾಗಿದೆ.
ದಕ್ಷಿಣ ಒಳನಾಡಿನಲ್ಲಿ ಸಹ ಕೇವಲ 3 ಸೆಂ.ಮೀ ಮಳೆಯೊಂದಿಗೆ (ಸಾಮಾನ್ಯ 9 ಸೆಂ.ಮೀ) ಶೇ 73 ರಷ್ಟು ಕೊರತೆಯನ್ನು ಎದುರಿಸುತ್ತಿದೆ. ಬೆಂಗಳೂರಿನಲ್ಲಿ 3 ಸೆಂ.ಮೀ (ಸಾಮಾನ್ಯ 6 ಸೆಂ.ಮೀ) ಮಳೆಯಾಗುವುದರೊಂದಿಗೆ, ಶೇ 50 ರಷ್ಟು ಮಳೆ ಕೊರತೆಯಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ