Karnataka Rain: ಕರ್ನಾಟಕದ ಬೆಂಗಳೂರು, ಕೊಡಗು ಸೇರಿ ಹಲವೆಡೆ ಮಳೆ; ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ
Karnataka Weather Today: ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಭಾರೀ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಕಳೆದೊಂದು ವಾರದಿಂದ ಕರ್ನಾಟಕದ (Rain in Karnataka) ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಕರಾವಳಿ, ಮಲೆನಾಡು, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆಗಳಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ತಮಿಳುನಾಡಿನ (Tamil Nadu Rains) ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ (Karnataka Weather Today) ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದಿನಿಂದ 4 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 4 ದಿನ ಗುಡುಗು ಸಹಿತ ಮಳೆಯಾಗಲಿದೆ.
ಮುಂದಿನ 4 ದಿನಗಳಲ್ಲಿ ಬಂಗಾಳಕೊಲ್ಲಿಯಿಂದ ಬಲವಾದ ನೈಋತ್ಯ ಮಾರುತಗಳು ಅರುಣಾಚಲ ಪ್ರದೇಶ, ಅಸ್ಸಾಂ-ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ವ್ಯಾಪಕ ಮಳೆಯನ್ನು ಉಂಟುಮಾಡುತ್ತದೆ ಎಂದು IMD ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ವಿಚಿತ್ರ ವಾತಾವರಣ ನಿರ್ಮಾಣವಾಗಿದೆ. ಹಗಲಿನಲ್ಲಿ ಭಾರೀ ಬಿಸಿಲು, ರಾತ್ರಿಯಲ್ಲಿ ಮಳೆಯಾಗುತ್ತಿದೆ. ತೀವ್ರವಾದ ಬಿಸಿಲಿನಿಂದಾಗಿ, ಕೆಲವು ಪ್ರದೇಶಗಳಲ್ಲಿ ಗಾಳಿ ಬೀಸಿದಾಗ ಮಳೆ ಬೀಳುವ ಒತ್ತಡವು ಸೃಷ್ಟಿಯಾಗುತ್ತಿದೆ. ಮಳೆಯ ಹೊಡೆತಕ್ಕೆ ದಕ್ಷಿಣ ಕನ್ನಡದ ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಮುಂತಾದೆಡೆ ಸಾಕಷ್ಟು ಹಾನಿಯಾಗಿದ್ದು, ಕರಾವಳಿ ಪ್ರದೇಶದಾದ್ಯಂತ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಒಂದು ವಾರ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಭಾರೀ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಯಾವೆಲ್ಲ ರಾಜ್ಯಗಳಲ್ಲಿ ಮಳೆಯ ಅಬ್ಬರ?: ಇಂದು ಅರುಣಾಚಲ ಪ್ರದೇಶ, ಮೇಘಾಲಯ, ಅಸ್ಸಾಂ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಉಪ-ಹಿಮಾಲಯ ಪಶ್ಚಿಮ ಬಂಗಾಳದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಹಿಮಪಾತವಾಗಬಹುದು. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರಾವಳಿ ಮಹಾರಾಷ್ಟ್ರ, ಗೋವಾ, ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಗುಜರಾತ್, ದಕ್ಷಿಣ ಪಂಜಾಬ್, ದಕ್ಷಿಣ ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಬಿಸಿಗಾಳಿಯ ಪರಿಸ್ಥಿತಿ ಇದೆ.
ಬಂಗಾಳ ಕೊಲ್ಲಿಯಿಂದ ತೇವಾಂಶವುಳ್ಳ ನೈಋತ್ಯ ಮಾರುತಗಳು ಈಶಾನ್ಯ ಭಾರತದಾದ್ಯಂತ ಹಲವಾರು ದಿನಗಳವರೆಗೆ ವ್ಯಾಪಕವಾದ ಮಳೆಯನ್ನು ಉಂಟುಮಾಡುತ್ತವೆ. ಇದರಿಂದ ಸ್ಥಳೀಯವಾಗಿ ಭಾರೀ ಮಳೆಯಾಗುತ್ತದೆ. ವಿಶೇಷವಾಗಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆ ಆರಂಭವಾಗಿದೆ. ಮುಂದಿನ ಐದು ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು, ಕೊಡಗು, ಮೈಸೂರಿನಲ್ಲಿಂದು ಗುಡುಗು ಸಹಿತ ಮಳೆ
Karnataka Rain: ಬೆಂಗಳೂರು, ಉತ್ತರ ಕನ್ನಡ, ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ