AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ; ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಣೆ

Karnataka Weather Today: ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ

Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ; ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಣೆ
ಮಳೆ
TV9 Web
| Edited By: |

Updated on: Apr 22, 2022 | 5:55 AM

Share

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯಾದ್ಯಂತ (Rain in Karnataka) ಇನ್ನೂ ಮೂರು ದಿನ ಮಳೆಯಾಗಲಿದೆ. ಇಂದಿನಿಂದ 3 ದಿನ ಕರ್ನಾಟಕದ (Karnataka Rains) ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆ ಬಹುತೇಕ ರಾಜ್ಯಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕೂಡ ಕರ್ನಾಟಕದ ಹಲವೆಡೆ ಗುಡುಗು-ಮಿಂಚು, ಮಳೆಯ ಸಾಧ್ಯತೆ ಇದೆ. ಏ. 23, ಹಾಗೂ ಏ.24ರಂದು ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಪಶ್ಚಿಮ ಘಟ್ಟದ ಒಂದೆರಡು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಏ.25ರಂದು ಕರಾವಳಿಯ ಎಲ್ಲಾ ಜಿಲ್ಲೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲೂ ಮಳೆ ಇನ್ನು ಕೆಲ ದಿನಗಳ ಕಾಲ ಮುಂದುವರೆದಿದೆ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ ಗುಜರಾತ್‌ನಲ್ಲೂ ಮಳೆಯಾಗಲಿದೆ ಅಂತ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶಗಳಲ್ಲಿ ಏಪ್ರಿಲ್ ಇನ್ನೆರಡು ದಿನಗಳು ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಇನ್ನು, ಬೆಂಗಳೂರಿನಲ್ಲಿ 3 ದಿನಗಳ ಕಾಲ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು, ಪಶ್ಚಿಮ ಘಟ್ಟಗಳ ಒಂದೆರಡು ಕಡೆ ಮಳೆಯಾಗಲಿದೆ ಎಂದು ವರದಿಯಾಗಿದೆ. ಉತ್ತರ ಒಳನಾಡಿನ ಕಲಬುರ್ಗಿ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಧಾರವಾಡ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಗುಡುಗು- ಮಿಂಚಿನೊಂದಿಗೆ ಮಳೆಯಾಗಲಿದೆ.

ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಜಾರ್ಖಂಡ್, ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಬಿಹಾರ, ಪೂರ್ವ ಉತ್ತರ ಪ್ರದೇಶ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಾದ್ಯಂತ ಇನ್ನೂ 4 ದಿನ ವರುಣನ ಆರ್ಭಟ; ಈ ರಾಜ್ಯಗಳಲ್ಲಿ ಇಂದು ಆಲಿಕಲ್ಲು ಮಳೆ

ಇಂದು ಬೆಂಗಳೂರಿನಲ್ಲಿ ಮಳೆಗೆ ಬಿಡುವು; ಗ್ರಾಮಾಂತರದಲ್ಲಿ ವರುಣನ ಆರ್ಭಟ, ಹಲವು ಕಡೆ ಭಾರಿ ಅನಾಹುತ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!