Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಚದುರಿದ ಮಳೆ; ಕೇರಳದಲ್ಲಿ ಹಳದಿ ಅಲರ್ಟ್​ ಘೋಷಣೆ

Karnataka Weather Today: ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ 2ರಿಂದ 3 ದಿನ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಕೇರಳದಲ್ಲಿ ಏ. 14ರವರೆಗೂ ಮಳೆಯಾಗುವ ನಿರೀಕ್ಷೆಯಿದೆ.

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಚದುರಿದ ಮಳೆ; ಕೇರಳದಲ್ಲಿ ಹಳದಿ ಅಲರ್ಟ್​ ಘೋಷಣೆ
ಕರ್ನಾಟಕ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 12, 2022 | 5:57 AM

ಬೆಂಗಳೂರು: ಕಳೆದ ಎರಡು ವಾರಗಳಿಂದ ಕರ್ನಾಟಕದಲ್ಲಿ ಹೆಚ್ಚಾಗಿದ್ದ ಮಳೆಯ ಅಬ್ಬರ ಇಂದಿನಿಂದ ಕಡಿಮೆಯಾಗುತ್ತಿದೆ. 15 ದಿನಗಳಿಂದ ಮಲೆನಾಡು, ಕರಾವಳಿ ದಾವಣಗೆರೆ, ಬೆಂಗಳೂರು, ಮೈಸೂರು, ಹಾಸನ, ಕೊಡಗಿನಲ್ಲಿ ಗುಡುಗು ಸಹಿತ ಮಳೆಯ ಆರ್ಭಟ (Heavy Rainfall) ಜೋರಾಗಿತ್ತು. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಕರ್ನಾಟಕದಲ್ಲೂ ಮಳೆಯಾಗಿತ್ತು. ಆದರೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ 2ರಿಂದ 3 ದಿನ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಕೇರಳದಲ್ಲಿ ಏ. 14ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ (Yellow Alert) ಕೂಡ ಘೋಷಿಸಲಾಗಿದೆ.

ಕೇರಳದ ಪಥನಾಂತಿಟ್ಟ, ಇಡುಕ್ಕಿ, ತಿರುವನಂತಪುರಂ, ಕೊಲ್ಲಂನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ಕೂಡ ತುಂತುರು ಮಳೆಯಾಗಲಿದೆ.

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ. ಏಪ್ರಿಲ್ 14ರವರೆಗೆ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 13 ಮತ್ತು 14ರಂದು ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಳೆಯಾಗಲಿದೆ. ಕೇರಳ- ಮಾಹೆಯಲ್ಲಿ ಗುಡುಗು- ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಮುಂದಿನ 3 ದಿನಗಳವರೆಗೆ ತಮಿಳುನಾಡು-ಪುದುಚೇರಿ-ಕಾರೈಕಲ್, ಲಕ್ಷದ್ವೀಪ ಪ್ರದೇಶ, ಕರಾವಳಿ ಆಂಧ್ರಪ್ರದೇಶ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ.

ಇಂದು ಪಂಜಾಬ್, ಹರಿಯಾಣ, ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 3 ದಿನಗಳಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ, ಛತ್ತೀಸ್​ಗಢ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಮಳೆಯಾಗಲಿದೆ. ಏಪ್ರಿಲ್ 14ರವರೆಗೆ ಅಸ್ಸಾಂ ಮತ್ತು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಏಪ್ರಿಲ್ 13-14ರಂದು ಭಾರೀ ಮಳೆಯಾಗಬಹುದು.

ಕೇರಳ-ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮುಂದಿನ 4 ದಿನಗಳವರೆಗೆ ತಮಿಳುನಾಡು-ಪುದುಚೇರಿ-ಕಾರೈಕಲ್, ಲಕ್ಷದ್ವೀಪ ಪ್ರದೇಶ, ಕರಾವಳಿ ಆಂಧ್ರಪ್ರದೇಶ, ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ; ಹಲವು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ

Karnataka Rain: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್