ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ (Karnataka Rains) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಇದರಲ್ಲಿ ಉತ್ತರ ಒಳನಾಡನ್ನು ಹೊರತುಪಡಿಸಿ ಉಳಿದ ಕಡೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹಗುರ ಮಳೆ ಸುರಿಯುವ ನಿರೀಕ್ಷೆ ಇದೆ.
Weather systems, rainfall/thunderstorm Forecast & Warnings:
A cyclonic circulation lies over central parts of Bay of Bengal in lower tropospheric levels. pic.twitter.com/3EayJ3otiF— India Meteorological Department (@Indiametdept) November 28, 2022
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಇನ್ನಿತರ ಪ್ರದೇಶಗಳಲ್ಲಿ ತುಂತುರು ಮಳೆಯ ವಾತಾವರಣ ಕಂಡು ಬರಲಿದೆ. ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಬೆಳಗ್ಗೆ ಚಳಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮುಂದಿನ ಎರಡು ದಿನ ಆಗಾಗ ತುಂತುರು ಮಳೆ ಮತ್ತು ಬೆಳಗ್ಗೆ ಚಳಿ ವಾತಾವರಣ ಕಂಡು ಬರಲಿದೆ. ಡಿಸೆಂಬರ್ 1ರಂದು ಬೆಂಗಳೂರಿನ ಬಹಳಷ್ಟು ಕಡೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ.
Weather forecast for next 7 days – Chennai pic.twitter.com/k1b2mh1xti
— Tamilnadu Weather-IMD (@ChennaiRmc) November 28, 2022
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಚದುರಿದ ಮಳೆ ಬೀಳಬಹುದು. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದಲ್ಲಿ ಇನ್ನೆರಡು ದಿನ ಸಾಧಾರಣ ಮಳೆ
ಡಿಸೆಂಬರ್ 1ರಿಂದ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಅಂಡಮಾನ್ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ವಾಯುವ್ಯ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಇನ್ನೂ 10 ದಿನಗಳ ಕಾಲ ಕಣಿವೆಯಲ್ಲಿ ಒಣ ಹವಾಮಾನ ಇರಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.
ಮುಂದಿನ ನಾಲ್ಕೈದು ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆಯನ್ನು ನಿರೀಕ್ಷಿಸಬಹುದು. ಅಲ್ಲದೆ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರಾವಳಿ ಕರ್ನಾಟಕದ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.