Karnataka Rain: ಕರ್ನಾಟಕದ 7 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್; ಬೆಂಗಳೂರಿಗೆ ಹಳದಿ ಅಲರ್ಟ್ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Aug 03, 2022 | 5:55 AM

Bangalore Rains: ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆ. 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

Karnataka Rain: ಕರ್ನಾಟಕದ 7 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್; ಬೆಂಗಳೂರಿಗೆ ಹಳದಿ ಅಲರ್ಟ್ ಘೋಷಣೆ
ಮಳೆ
Follow us on

Monsoon 2022: ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರ್ನಾಟಕದ 7 ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆ (IMD) ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 6ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ.

ಇಂದಿನಿಂದ 4 ದಿನಗಳ ಕಾಲ ಅಂದರೆ ಆಗಸ್ಟ್ 6ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ (ಆ. 3) ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಟ್ಕಳದ ಮುತ್ತಳ್ಳಿ ಗ್ರಾಮದಲ್ಲಿ ಮಳೆಯ ಅವಘಡದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Karnataka Rain: ಭಾರೀ ಮಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು (ಆಗಸ್ಟ್ 3) ಮತ್ತು ನಾಳೆ ಮಳೆಯಾಗಲಿದೆ. ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4ರಂದು ಭಾರೀ ಮಳೆ ಬೀಳುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಇಂದಿನಿಂದ ಆಗಸ್ಟ್ 4ರವರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ತೆಲಂಗಾಣ, ರಾಯಲಸೀಮಾ, ಲಕ್ಷದ್ವೀಪ, ಗೋವಾ, ಆಂಧ್ರಪ್ರದೇಶ, ಯಾನಂ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಇಂದು ಕೇರಳ ಮತ್ತು ತಮಿಳುನಾಡಿನ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಮುಂದಿನ 4 ದಿನಗಳ ಕಾಲ ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದಲ್ಲದೆ, ಮುಂದಿನ 3 ದಿನಗಳಲ್ಲಿ ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rain: ದಕ್ಷಿಣ ಕನ್ನಡ-ಕೊಡಗು ಗಡಿ ಭಾಗದಲ್ಲಿ ಮೇಘಸ್ಫೋಟ; ಜಲಾವೃತಗೊಂಡ ಸಂಪಾಜೆ, ಹಲವು ಮನೆಗಳು ಮುಳುಗಡೆ

ಕೇರಳದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಇದರೊಂದಿಗೆ 4 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಕೂಡ ನೀಡಲಾಗಿದೆ. ಆಗಸ್ಟ್ 4ಕ್ಕೆ ಹವಾಮಾನ ಇಲಾಖೆಯು 9 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಮತ್ತು 3 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.

ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಅತಿ ಹೆಚ್ಚು ಬೀಳುವ ಸಾಧ್ಯತೆಯಿದೆ. ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ರಾಯಲಸೀಮಾದಲ್ಲಿ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಉತ್ತರಾಖಂಡ, ಉತ್ತರ ಪ್ರದೇಶ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಕರಾವಳಿಯಲ್ಲಿ ಗುಡುಗು ಸಹಿತ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.