Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 2ರವರೆಗೂ ಗುಡುಗು ಸಹಿತ ಮಳೆ
Bangalore Rains: ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ (Karnataka Rains) ಮತ್ತೆ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಅ. 2ರವರೆಗೂ ಮಳೆಯಾಗಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜೊತೆಗೆ ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಬಹುತೇಕ ಎಲ್ಲ ಕಡೆಗಳಲ್ಲಿ ಕಳೆದ 2 ವಾರದಿಂದ ಮಳೆ ಸಂಪೂರ್ಣವಾಗಿ ಕಡಿಮೆಯಾಗಿತ್ತು. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ, ಚಳಿ ವಾತಾವರಣ ಕಂಡು ಬರುತ್ತಿದೆ. ಈ ಸುಳಿಗಾಳಿಯು ಒಡಿಶಾ ಕರಾವಳಿ ಮಾರ್ಗವಾಗಿ ಸಾಗಲಿದೆ. ಹೀಗಾಗಿ ಇಂದು ಕರ್ನಾಟಕದ ಹಲವೆಡೆ ಮಳೆಯಾಗಬಹುದು.
ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಿದೆ. ಈ ಪ್ರದೇಶಗಳಲ್ಲಿ ಇಂದು ಕೂಡ ಮಳೆ ಆಗಲಿದೆ. ಆದರೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ. ಭಾಗದಲ್ಲಿ ಸಾಧಾರಣವಾಗಿ ಕೆಲವೊಮ್ಮೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಹ ತುಂತುರು ಮಳೆಯಾಗಬಹುದು. ಬೆಳಗಾವಿ, ಹಾವೇರಿ, ಬಾಗಲಕೋಟೆ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳದಲ್ಲೂ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಗಳು ದಟ್ಟವಾಗಿವೆ. ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕಲಬುರ್ಗಿ, ಬೀದರ್, ರಾಯಚೂರು, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Bangalore Rain: ಮತ್ತೆ ರಾಜಧಾನಿಗೆ ಎಂಟ್ರಿ ಕೊಟ್ಟ ವರುಣ -ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ
ಇಂದು ಯಾವೆಲ್ಲ ರಾಜ್ಯಗಳಲ್ಲಿ ಮಳೆ?: ಇಂದು ತೆಲಂಗಾಣ, ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ಗಢ, ಒಡಿಶಾ, ಮಹಾರಾಷ್ಟ್ರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಬಿಹಾರ, ಗುಜರಾತ್, ಮಧ್ಯಪ್ರದೇಶ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.