ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ಮಲೆನಾಡು (Malnad), ಕರಾವಳಿ ಭಾಗಗಳಲ್ಲಿ (Coastal Karnataka) ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 17 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ.
ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇದನ್ನೂ ಓದಿ: Karnataka Rain Updates: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ ಸಾಧ್ಯತೆ
IMD ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮಲೆನಾಡು ಪ್ರದೇಶಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಗೇ ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ನಿರಂತರ ಮಳೆಯಾಗಲಿದೆ.
ಈ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿರುತ್ತದೆ. ನಿರೀಕ್ಷಿತ ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ.
ಇದನ್ನೂ ಓದಿ: Chamarajanagar: ತುಂತುರು ಮಳೆಯ ನಡುವೆ ಬಿಳಿಗಿರಿ ರಂಗನಬೆಟ್ಟಕ್ಕೆ ಮುತ್ತಿಕ್ಕುತ್ತಿರುವ ಮೋಡಗಳು
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ, ಗೋವಾ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾದಲ್ಲಿ ಗುಡುಗು ಸಹಿತ ಮಳೆಯಾಗಬಹುದು.