Karnataka Rain: ಕರ್ನಾಟಕ, ತಮಿಳುನಾಡು, ಆಂಧ್ರದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ
Monsoon 2022: ಇಂದು ಮಹಾರಾಷ್ಟ್ರ, ಗೋವಾ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
Bangalore Rains: ಕರ್ನಾಟಕದಲ್ಲಿ ಮುಂಗಾರು (Monsoon) ಆಗಮನವಾಗುವುದಕ್ಕೂ ಮೊದಲಿನ ಪರಿಸ್ಥಿತಿಗೆ ಹೋಲಿಸಿದರೆ ಮಾನ್ಸೂನ್ ಶುರುವಾದ ನಂತರವೇ ಮಳೆಯ ಅಬ್ಬರ ಕಡಿಮೆಯಾಗಿದೆ. ಮೇ ತಿಂಗಳಲ್ಲಿ ಸುರಿದ ಭಾರೀ ಮಳೆಗೆ ಜನ ಕಂಗಾಲಾಗಿದ್ದರು. ಇದೀಗ ಮಳೆ ಕಡಿಮೆಯಾಗಿದ್ದರೂ ಇಂದಿನಿಂದ 4 ದಿನ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರವರೆಗೆ ವರುಣನ ಅಬ್ಬರ (Heavy Rainfall) ಹೆಚ್ಚಾಗಲಿದೆ. ಇಂದು (ಜೂನ್ 11) ಮಹಾರಾಷ್ಟ್ರ, ಗೋವಾ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇಂದು ಬೆಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಇಂದಿನಿಂದ ಜೂನ್ 14ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Karnataka Rain: ಮಲೆನಾಡು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ
ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರಿನಲ್ಲಿ ಅಪಾಯದ ಗ್ರಾಮಗಳು ಹಾಗೂ ಸ್ಥಳಗಳನ್ನು ಗುರುತು ಮಾಡಲಾಗಿದೆ. ಎನ್. ಆರ್. ಪುರದ 21, ಮೂಡಿಗೆರೆಯ 33, ಚಿಕ್ಕಮಗಳೂರಿನ 5, ಕೊಪ್ಪದ 6, ಶೃಂಗೇರಿಯ 9, ಕಡೂರಿನ 2, ತರೀಕೆರೆಯ 1 ಗ್ರಾಮವನ್ನು ಜಿಲ್ಲಾಡಳಿತ ಅಪಾಯದ ಗ್ರಾಮಗಳೆಂದು ಗುರುತಿಸಿದೆ. ಹಾಗೇ, ಎನ್. ಆರ್. ಪುರದ 17, ಮೂಡಿಗೆರೆಯ 24, ಶೃಂಗೇರಿಯ 7 ಹಾಗೂ ಚಿಕ್ಕಮಗಳೂರು-ಕೊಪ್ಪದ ತಲಾ 6 ಗ್ರಾಮಗಳನ್ನು ಸುರಕ್ಷಿತ ಪ್ರದೇಶವೆಂದು ಪಟ್ಟಿ ಮಾಡಲಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪದಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ತೆಲಂಗಾಣದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ಮತ್ತು ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮತ್ತು ಅತಿ ಭಾರೀ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ‘ಅತ್ಯಂತ ಭಾರೀ ಮಳೆ’ ಬೀಳಲಿದೆ.
ಇಂದು ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮೇಘಾಲಯ, ಅಸ್ಸಾಂ ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂನಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತ್ರಿಪುರಾ, ಲಕ್ಷದ್ವೀಪ, ಕೊಂಕಣ ಕರಾವಳಿಯಲ್ಲಿ ಸ್ಥಳೀಯವಾಗಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿನ ಎತ್ತರದ ಪ್ರದೇಶಗಳಲ್ಲಿ ಹಿಮ ಸುರಿಯಬಹುದು. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಎತ್ತರದ ಪ್ರದೇಶಗಳಲ್ಲಿ ಹಿಮ ಕೂಡ ಸುರಿಯಲಿದೆ. ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಗುಜರಾತ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ