Karnataka Rain: ಬೆಂಗಳೂರಿನಲ್ಲಿ ಇಂದು ತುಂತುರು ಮಳೆ; ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ

Bengaluru Rain: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದಾಗಿ ನಾಳೆಯಿಂದ (ಜೂನ್ 9) 3 ದಿನಗಳವರೆಗೆ ಭಾರೀ ಮಳೆಯಾಗಲಿದ್ದು, ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Karnataka Rain: ಬೆಂಗಳೂರಿನಲ್ಲಿ ಇಂದು ತುಂತುರು ಮಳೆ; ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ
ಕರ್ನಾಟಕದಲ್ಲಿ ಮಳೆImage Credit source: Twitter
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 08, 2022 | 5:52 AM

Bangalore Rains: ಕರ್ನಾಟಕದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. 2 ದಿನಗಳಿಂದ ಬೆಂಗಳೂರಿನಲ್ಲೂ (Bengaluru Rain) ಸಂಜೆಯ ವೇಳೆ ವರುಣನ ಆರ್ಭಟ ಉಂಟಾಗುತ್ತಿದೆ. ಜೂನ್ 9ರಿಂದ 11ರವರೆಗೆ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಮತ್ತು ನಾಳೆ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ. ಜೂನ್ 9ರಿಂದ ಮಳೆ ಹೆಚ್ಚಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದಾಗಿ ನಾಳೆಯಿಂದ (ಜೂನ್ 9) 3 ದಿನಗಳವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿಯ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗಲಿದೆ. ಜೂನ್ 9ರಿಂದ 11ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ನಾಳೆಯಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ ಸುರಿಯಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಅಬ್ಬರಿಸಿದ ಮಳೆರಾಯ; ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಕರಾವಳಿಗೆ ಹಳದಿ ಅಲರ್ಟ್​

ಇದನ್ನೂ ಓದಿ
Image
Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ
Image
Karnataka Rain: ಕರ್ನಾಟಕದಲ್ಲಿ ಅಬ್ಬರಿಸಿದ ಮಳೆರಾಯ; ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಕರಾವಳಿಗೆ ಹಳದಿ ಅಲರ್ಟ್​
Image
Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಬೆಂಗಳೂರು, ಕರಾವಳಿಯಲ್ಲಿ ಹೈ ಅಲರ್ಟ್
Image
Bengaluru Rain: ಸಂಜೆ ವೇಳೆಗೆ ಸುರಿದ ಮಳೆ, ವಾಹನ ಸವಾರರ ಪರದಾಟ

ದಕ್ಷಿಣ ಕರ್ನಾಟಕದ ಹಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಈಗಾಗಲೇ ಮೇ ತಿಂಗಳಲ್ಲಿ ಸಾಕಷ್ಟು ಪ್ರಮಾಣದ ಅಕಾಲಿಕ ಮಳೆಯಾಗಿದೆ. ಮೇ 15ರಿಂದ 21ರ ನಡುವೆ ರಾಜ್ಯದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 400ಕ್ಕೂ ಹೆಚ್ಚು ಪ್ರಾಣಿಗಳು ಸಹ ಪ್ರಾಣ ಕಳೆದುಕೊಂಡಿವೆ. 4,500ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಅಕಾಲಿಕ ಮಳೆಯಿಂದಾಗಿ 7,010 ಹೆಕ್ಟೇರ್ ಕೃಷಿ ಭೂಮಿ ಮತ್ತು 5,736 ಹೆಕ್ಟೇರ್ ತೋಟಗಾರಿಕೆ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ.

ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲೂ ಸಹ ಉತ್ತಮ ಮಳೆಯಾಗಲಿದೆ. ಹವಾಮಾನ ಇಲಾಖೆಯು, “ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ತೆಲಂಗಾಣದಲ್ಲಿ ಮುಂದಿನ 4 ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಕರ್ನಾಟಕ ಮಾತ್ರವಲ್ಲದೆ ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇಘಾಲಯದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ದಕ್ಷಿಣ ಮತ್ತು ಉತ್ತರ ಆಂತರಿಕ ಕರ್ನಾಟಕ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಮಣಿಪುರ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಬಿಹಾರ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಮಳೆ ಅಥವಾ ಹಿಮದ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಗುಜರಾತ್, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮರಾಠವಾಡ, ವಿದರ್ಭ, ಛತ್ತೀಸ್‌ಗಢ, ರಾಯಲಸೀಮಾ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು