Karnataka Rain: ಕರ್ನಾಟಕದ 20 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Weather Today: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಕರ್ನಾಟಕದ 20 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 16, 2022 | 6:02 AM

ಬೆಂಗಳೂರು: ಬೆಂಗಳೂರಿನಲ್ಲಿ ತುಂತುರು ಮಳೆ ಮುಂದುವರೆದಿದ್ದು, ಇದರ ಜೊತೆ ಚಳಿಯೂ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು (Malnad), ಕರಾವಳಿಯ (Coastal Karnataka) ಸುಮಾರು 20 ಜಿಲ್ಲೆಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain Updates: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ ಸಾಧ್ಯತೆ

IMD ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮಲೆನಾಡು ಪ್ರದೇಶಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಗೇ ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ನಿರಂತರ ಮಳೆಯಾಗಲಿದೆ.

ಇಂದು ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿರುತ್ತದೆ. ನಿರೀಕ್ಷಿತ ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; ಮಲೆನಾಡು, ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ ಅಲ್ಲಲ್ಲಿ ತುಂತುರು ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು. ಕರ್ನಾಟಕ, ತಮಿಳುನಾಡು, ಲಕ್ಷದ್ವೀಪ, ಲಡಾಖ್, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತವಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಕೂಡ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್