Karnataka Rain: ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಆರ್ಭಟ; ಹಲವೆಡೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

| Updated By: preethi shettigar

Updated on: Nov 20, 2021 | 7:04 AM

Karnataka Weather Today: ಹವಾಮಾನ ಇಲಾಖೆಯಿಂದ ಇಂದು ಕರಾವಳಿ, ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Karnataka Rain: ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಆರ್ಭಟ; ಹಲವೆಡೆ ಶಾಲಾ-ಕಾಲೇಜಿಗೆ ರಜೆ ಘೋಷಣೆ
ಕರ್ನಾಟಕದಲ್ಲಿ ಸತತ ಮಳೆ ಮುಂದುವರಿದಿದೆ
Follow us on

Bengaluru Rain: ಕರ್ನಾಟಕದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ ಸುರಿಯಲಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಿಂದ ಶಾಲಾ- ಕಾಲೇಜುಗಳನ್ನು ಮುಚ್ಚಲಾಗಿದೆ. ಇಂದು ಕರಾವಳಿ, ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ, ಕೋಲಾರ ಜಿಲ್ಲೆಯಲ್ಲಿ, ತುಮಕೂರು, ರಾಮನಗರ, ಮೈಸೂರು, ಧಾರವಾಡ ಹಾಗೂ ಹಾವೇರಿ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ಇಂದು ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ ಮುಂತಾದೆಡೆ ಬೆಳೆ ನಾಶವಾಗಿದೆ. ತುಮಕೂರು ಜಿಲ್ಲೆಯಲ್ಲಿ ನಿರಂತರ ಮಳೆಯಾದ ಹಿನ್ನೆಲೆಯಲ್ಲಿ ಕೃಷಿ ಭೂಮಿಗೆ ಅಪಾರ ಹಾನಿಯಾಗಿದೆ. ನವೆಂಬರ್ 23ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಎದುರಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮೈಸೂರು, ಶಿವಮೊಗ್ಗ, ಕೊಡಗು, ಮಲೆನಾಡು ಸೇರಿದಂತೆ 11 ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 23ರವರೆಗೆ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ. ತಮಿಳುನಾಡಿನಲ್ಲಿ ಭಾರೀ ಪ್ರವಾಹ ಉಂಟಾಗಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು, ಪುದುಚೇರಿ, ತೆಲಂಗಾಣ, ಕೇರಳದಲ್ಲಿ ಇಂದು ಭಾರೀ ಮಳೆಯಾಗಲಿದೆ. ಹಾಗೇ, ಮುಂಬೈನಲ್ಲಿ ಕೂಡ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿಯ ಕೆಲವು ಸ್ಥಳಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದೆ. ಹಾಗೇ, ಗುಜರಾತ್​ನಲ್ಲಿ ಕೂಡ ಇಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ತಮಿಳುನಾಡು, ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳ ಇತರ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದಲ್ಲಿ ನಾಳೆಯವರೆಗೆ ಸಾಧಾರಣ ಮಳೆಯಾಗಲಿದೆ. ಇಂದಿನವರೆಗೆ ಮಹಾರಾಷ್ಟ್ರ, ಗೋವಾ ಮತ್ತು ಕೊಂಕಣದಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇಂದು ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಸ್ಥಳೀಯ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡಿನಲ್ಲಿ ಕೂಡ ಮಳೆ ಮುಂದುವರೆಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಚೆನ್ನೈ ಮತ್ತು ಇತರ 16 ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಚೆನ್ನೈ ಮತ್ತು ತಿರುವಳ್ಳೂರು ಪೆರಂಬಲೂರು, ಅರಿಯಲೂರು, ಧರ್ಮಪುರಿ, ತಿರುಪತ್ತೂರು, ವೆಲ್ಲೂರು ಮತ್ತು ರಾಣಿಪೇಟ್‌ ಸೇರಿದಂತೆ 16 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ನೀಡಲಾಗಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಹಲವೆಡೆ ನಿರಂತರ ಮಳೆ; ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ? ವಿವರ ಇಲ್ಲಿದೆ

Karnataka Rains: ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆ; ಅಪಾರ ಪ್ರಮಾಣದ ಬೆಳೆ, ಆಸ್ತಿ ಹಾನಿ- ವಿವರ ಇಲ್ಲಿದೆ