Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ

Bengaluru Rain: ಇಂದಿನಿಂದ ನವೆಂಬರ್ 4ರವರೆಗೆ ಕರಾವಳಿ, ಬೆಂಗಳೂರಿನಲ್ಲಿ ಮಳೆಯಾಗಲಿದೆ. ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.

Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 02, 2022 | 6:40 AM

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ (Rain in Karnataka) ಎಲ್ಲೆಡೆ ವರುಣನ ಆರ್ಭಟ ಕಡಿಮೆಯಾಗಿತ್ತು. ಇಂದಿನಿಂದ (ನ. 2) ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ (Monsoon) ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ಇಂದಿನಿಂದ ನವೆಂಬರ್ 4ರವರೆಗೆ ಕರಾವಳಿ, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಇಂದಿನಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ: ಹಿಂಗಾರು ಆರ್ಭಟವೂ ಜೋರು: ನ 2ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಈಶಾನ್ಯ ಮುಂಗಾರು ಇನ್ನಷ್ಟು ಚುರುಕುಗೊಳ್ಳುವ ಸಾಧ್ಯತೆಯಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ನವೆಂಬರ್ 5ರವರೆಗೆ ಭಾರಿ ಮಳೆಯಾಗಲಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ, ತಿರುವಳ್ಳೂರು, ಕಾಂಚೀಪುರಂ, ರಾಣಿಪೇಟ್, ವೆಲ್ಲೂರು, ತಿರುಪತ್ತೂರು, ಕೃಷ್ಣಗಿರಿ, ಧರ್ಮಪುರಿ ಮತ್ತು ಸೇಲಂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಚೆನ್ನೈ, ಚೆಂಗಲ್ಪಟ್ಟು, ತಿರುವಣ್ಣಾಮಲೈ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ನಾಗಪಟ್ಟಿಣಂ, ಮೈಲಾಡುತುರೈ, ಪುದುಕ್ಕೊಟ್ಟೈ, ನಾಮಕ್ಕಲ್ ಮತ್ತು ತಿರುಚಿರಾಪಳ್ಳಿ ಜಿಲ್ಲೆಗಳುಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ನವೆಂಬರ್ 5ರವರೆಗೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ತಮಿಳುನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಣಿಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಇಂದು ಆರೆಂಜ್ ಅಲರ್ಟ್‌ ನೀಡಲಾಗಿದೆ. ಇಂದು ಪುದುಚೇರಿ ಮತ್ತು ಕೇರಳದ ಮಾಹೆಗೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ. ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ತೆಲಂಗಾಣ, ಕೊಂಕಣ, ಗೋವಾದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಹಿಂಗಾರು ಮಳೆ ಆರಂಭ; ನಾಳೆಯಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಇನ್ನೆರಡು ದಿನಗಳ ಕಾಲ ಅಂದರೆ ನವೆಂಬರ್ 3ರವರೆಗೆ ಭಾರೀ ಮಳೆಯಾಗಲಿದೆ. ನವೆಂಬರ್ 3ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯೊಂದಿಗೆ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ