AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲಿ ನಾಳೆಯಿಂದ ಭಾರೀ ಮಳೆ

Monsoon 2022: ನಾಳೆಯಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ತೀವ್ರತೆ ಪಡೆದುಕೊಳ್ಳಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ‌ ಮಳೆಯ ಮುನ್ಸೂಚನೆ ಇದೆ.

Karnataka Rain: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲಿ ನಾಳೆಯಿಂದ ಭಾರೀ ಮಳೆ
ಕರ್ನಾಟಕದಲ್ಲಿ ಮಳೆImage Credit source: Live Mint
TV9 Web
| Edited By: |

Updated on: Jun 14, 2022 | 5:53 AM

Share

Weather Today: ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗುತ್ತಿದ್ದು, ಇಂದಿನಿಂದ 3 ದಿನ ವರುಣನ ಆರ್ಭಟ (Heavy Rainfall) ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ, ಕರಾವಳಿಯಲ್ಲಿ ಹಳದಿ ಅಲರ್ಟ್​ (Yellow Alert) ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 15ರಿಂದ ಮಳೆ ಹೆಚ್ಚಾಗಲಿದೆ. ಜೂನ್ 16ರಿಂದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ನಾಳೆಯಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ತೀವ್ರತೆ ಪಡೆದುಕೊಳ್ಳಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ‌ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರದ‌ಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಇಂದು ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳಲ್ಲಿ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಲೆನಾಡು, ಅರೆ ಬಯಲು ಸೀಮೆ ಪ್ರದೇಶದಲ್ಲಿ ಮುಂಗಾರು ನಿಧಾನವಾಗಿ ಪ್ರವೇಶಿಸುತ್ತಿದೆ. ಇಂದಿನಿಂದ ಮುಂಗಾರಿನ ಆರ್ಭಟ ಹೆಚ್ಚಾಗಲಿದೆ.

ಇದನ್ನೂ ಓದಿ
Image
Karnataka Rain: ಕರ್ನಾಟಕ, ತಮಿಳುನಾಡು, ಆಂಧ್ರದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ
Image
Karnataka Rain: ಮಲೆನಾಡು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ
Image
Karnataka Rain: ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆ; ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್​ ಘೋಷಣೆ

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ; ಇನ್ನೂ 3 ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆ;

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ. 15ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ. 16ರಿಂದ ಮಳೆ ಬಿರುಸು ಪಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮೇಘಾಲಯ ಮತ್ತು ಅಸ್ಸಾಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮ ಸುರಿಯಬಹುದು. ಗೋವಾ, ಕರ್ನಾಟಕ, ತೆಲಂಗಾಣ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಗಂಗಾನದಿ-ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಲಡಾಖ್‌ನಲ್ಲಿ ಹಿಮ ಸುರಿಯಬಹುದು. ಪಂಜಾಬ್‌ನ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 45 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚಾಗಿರುತ್ತದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ