AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರಾವಳಿಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಮಲೆನಾಡಿನಲ್ಲಿ 4 ದಿನ ವರುಣನ ಆರ್ಭಟ

Bengaluru Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ. ಕರಾವಳಿಯಲ್ಲಿ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ.

Karnataka Rain: ಕರಾವಳಿಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಮಲೆನಾಡಿನಲ್ಲಿ 4 ದಿನ ವರುಣನ ಆರ್ಭಟ
ಮಳೆImage Credit source: NDTV
TV9 Web
| Edited By: |

Updated on: Jun 17, 2022 | 5:55 AM

Share

ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆ ಮಳೆ ಕೊಂಚ ಕಡಿಮೆಯಾಗಿತ್ತು. ಆದರೆ, ಇಂದಿನಿಂದ ಮತ್ತೆ ನೈಋತ್ಯ ಮುಂಗಾರು ಮಳೆ (Monsoon) ಆರಂಭವಾಗಲಿದ್ದು, ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ (Heavy Rainfall) ಸುರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 20ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಹಳದಿ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಇಂದಿನಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ
Image
Karnataka Rain: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ; ಅಸ್ಸಾಂನಲ್ಲಿ ರೆಡ್ ಅಲರ್ಟ್​ ಘೋಷಣೆ
Image
Karnataka Rain: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮುಂಗಾರು ಆರ್ಭಟ; ಬೆಂಗಳೂರಿನಲ್ಲಿ ಇಂದು ಚದುರಿದ ಮಳೆ
Image
Karnataka Rain: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲಿ ನಾಳೆಯಿಂದ ಭಾರೀ ಮಳೆ

ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಜೂ.19ರವರೆಗೆ ಹಳದಿ ಅಲರ್ಟ್‌ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜೂ. 20ರವರೆಗೆ ಹಳದಿ ಅಲರ್ಟ್‌ ನೀಡಲಾಗಿದೆ. ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿ 15 ದಿನಗಳೇ ಕಳೆದರೂ ಮಳೆ ಬಿರುಸು ಪಡೆಯದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ; ಅಸ್ಸಾಂನಲ್ಲಿ ರೆಡ್ ಅಲರ್ಟ್​ ಘೋಷಣೆ

ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂನ ಕೆಲವು ಭಾಗಗಳಲ್ಲಿ ಇಂದು ಅತ್ಯಂತ ಭಾರೀ ಮಳೆಯ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಾರ್ಖಂಡ್, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್​​ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೇರಳ ಮತ್ತು ಮಾಹೆಯಲ್ಲಿ ಮಳೆಯಾಗಲಿದೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ವ್ಯಾಪಕ ಮಳೆಯಾಗಲಿದೆ. ಜೊತೆಗೆ ಹಿಮವೂ ಬೀಳುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಗೋವಾ, ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ವಿದರ್ಭ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ಇದೆ. ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಮತ್ತು ಮರಾಠವಾಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚಿರುವ ಸಾಧ್ಯತೆಯಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?