Bangalore Rains: ಕರ್ನಾಟಕದಲ್ಲಿ 2 ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯಾದ್ಯಂತ (Karnataka Rainfall) ಮುಂದಿನ 3 ದಿನ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ (Bengaluru Rain), ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಸಿಡಿಲು ಮತ್ತು ಗುಡುಗು ಸಹಿತ ಮಳೆಯಾಗಲಿದೆ.
ಇಂದು ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ 5 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಮಾಣಿ, ತುಮಕೂರು ಜಿಲ್ಲೆಯ ಬರಗೂರಿನಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಇದೇ ವೇಳೆ ಕಲಬುರಗಿ ಮತ್ತು ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಇದನ್ನೂ ಓದಿ: Karnataka Rain: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಬೆಂಗಳೂರು, ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್
ಕಳೆದ ಭಾನುವಾರವೇ ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸಿದೆ. ನೈಋತ್ಯ ಮುಂಗಾರು ಮಾರುತಗಳು ಕಳೆದ ಭಾನುವಾರವೇ ಕೇರಳ ಪ್ರವೇಶಿಸಿದ್ದು, ವಾಡಿಕೆಗಿಂತಲೂ ಮೂರು ದಿನ ಮೊದಲೇ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಸಾಮಾನ್ಯವಾಗಿ ಜೂ.1ರಂದು ಮಾನ್ಸೂನ್ ಕೇರಳ ಪ್ರವೇಶಿಸುವುದು ವಾಡಿಕೆ. ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ಕರಾವಳಿ, ಮಲೆನಾಡು, ಬೆಂಗಳೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
IMD has announced the onset of South West Monsoon over Coastal Karnataka and most parts of South Interior Karnataka including #Bengaluru today. Northern Limit of Monsoon passes through Karwar, Shivamogga, Chikkamagalur and Bengaluru. #Monsoon2022 pic.twitter.com/E6JMsF0BQ2
— Bengaluru Weather (@BngWeather) May 31, 2022
ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ