AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಅ. 10ರವರೆಗೆ ಭಾರೀ ಮಳೆ

Bengaluru Rains: ಕರ್ನಾಟಕದ ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರವಾಗಿ ಮಳೆ ಸುರಿಯುವ ಸೂಚನೆ ಇದೆ. ಇಂದಿನಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಅ. 10ರವರೆಗೆ ಭಾರೀ ಮಳೆ
ಮಳೆImage Credit source: PTI
TV9 Web
| Edited By: |

Updated on: Oct 08, 2022 | 6:28 AM

Share

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಬೆಂಗಳೂರು (Bengaluru Rains) ಸೇರಿದಂತೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಯ ತಾಜಾ ಮುನ್ಸೂಚನೆಗಳ ಪ್ರಕಾರ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದಿನಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮತ್ತೆ ಶುರುವಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಇಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಮತ್ತೆ ಮಳೆ ಶುರು; ಹಲವೆಡೆ ಹಳದಿ ಅಲರ್ಟ್ ಘೋಷಣೆ

ಅಕ್ಟೋಬರ್ 10ರಂದು ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಪ್ಪಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಭಾಗಗಳಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರವಾಗಿ ಮಳೆ ಸುರಿಯುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಎದ್ದಿದ್ದ ಮೇಲ್ಮೈ ಸುಳಿಗಾಳಿಯು ದಕ್ಷಿಣ ಕರಾವಳಿಯತ್ತ ಸಾಗಿದೆ. ಅದು ಸಮುದ್ರ ಮಟ್ಟದಿಂದ ಸುಮಾರು 3.5ಕಿಲೋ ಮೀಟರ್ ಎತ್ತರದಲ್ಲಿದೆ. ಅದೇ ರೀತಿ ಬಂಗಾಳ ಕೊಲ್ಲಿ ಪಶ್ಚಿಮ ಸಮುದ್ರ ಭಾಗದಲ್ಲಿ ಉಂಟಾಗಿದ್ದ ಮತ್ತೊಂದು ಮೇಲ್ಮೈ ಸುಳಿಗಾಳಿಯು ದುರ್ಬಲಗೊಂಡಿಲ್ಲ. ಈ ಕಾರಣದಿಂದ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ.

ಕರ್ನಾಟಕಕ್ಕೆ ಅಕ್ಟೋಬರ್ 2ನೇ ವಾರದಲ್ಲಿ ಹಿಂಗಾರು ಪ್ರವೇಶವಾಗಲಿದೆ. ಅಲ್ಲಿಯ ತನಕ ಮುಂಗಾರು ಮಳೆ ಮುಳೆ ಮುಂದುವೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Rain Updates: ಈ ವೀಕೆಂಡ್​ನಲ್ಲಿ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ; ಮುಂಬೈನಲ್ಲಿ ಹಳದಿ ಅಲರ್ಟ್​ ಘೋಷಣೆ

ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುರುವಾರ ಗುಡುಗು ಸಹಿತ ಜೋರು ಮಳೆ ಸುರಿದಿದೆ. ಈ ಮಳೆ ಮುಂದಿನ 3 ದಿನಗಳ ಕಾಲ (ಅಕ್ಟೋಬರ್ 10ರವರೆಗೆ) ಮುಂದುವರಿಯಲಿದೆ. ಈ ಭಾಗದ ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವು ಕಡೆಗಳಲ್ಲಿ ದಿನ ಬಿಟ್ಟು ದಿನ ಧಾರಾಕಾರವಾಗಿ ಮಳೆ ಅಬ್ಬರಿಸಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ಇಂದು ಮಧ್ಯ, ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈಶಾನ್ಯ ಭಾರತದಲ್ಲಿ ಕೂಡ ಭಾರೀ ಮಳೆಯಾಗಬಹುದು. ಉತ್ತರಾಖಂಡದಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್, ಬಿಹಾರ, ಹರಿಯಾಣ, ಚಂಡೀಗಢ, ದೆಹಲಿ, ಗುಜರಾತ್, ಗೋವಾ, ಮಧ್ಯ ಮಹಾರಾಷ್ಟ್ರ, ವಿದರ್ಭ, ಛತ್ತೀಸ್‌ಗಢ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಪಂಜಾಬ್, ಹಿಮಾಚಲ ಪ್ರದೇಶ, ರಾಜಸ್ಥಾನ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್