Karnataka Rain: ಕರ್ನಾಟಕದ ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
Bengaluru Rains: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಪ್ರಮಾಣದ ಮಳೆ ಬೀಳಲಿದೆ. ಅಕ್ಟೋಬರ್ 10 ಮತ್ತು 11ರಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರು: ಕರ್ನಾಟಕದ (Karnataka Rain) ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಅ. 11ರವರೆಗೂ ಭಾರೀ ಮಳೆಯಾಗಲಿದೆ. ಇಂದಿನಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಅ. 11ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಘೋಷಿಸಲಾಗಿದೆ. ರಾಜ್ಯದ ವಿವಿಧೆಡೆ ಮುಂದಿನ 3 ದಿನ ಭಾರೀ ಮಳೆ ಆಗಲಿದೆ. ಹವಾಮಾನ ವೈಪರೀತ್ಯದಿಂದ ಮಳೆ ಆಗುತ್ತಿದೆ. ಮಳೆ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಪ್ರಮಾಣದ ಮಳೆ ಬೀಳಲಿದೆ. ಅಕ್ಟೋಬರ್ 10 ಮತ್ತು 11ರಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣೆಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉತ್ತಮ ಮಳೆ ಆಗಲಿದೆ.
ಇದನ್ನೂ ಓದಿ: Karnataka Rain: ನಿಲ್ಲದ ಮಳೆರಾಯನ ಅಬ್ಬರ, ಈ ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿ
ಅಕ್ಟೋಬರ್ 10ರಂದು ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಪ್ಪಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಭಾಗಗಳಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರವಾಗಿ ಮಳೆ ಸುರಿಯುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕಕ್ಕೆ ಅಕ್ಟೋಬರ್ 2ನೇ ವಾರದಲ್ಲಿ ಹಿಂಗಾರು ಪ್ರವೇಶವಾಗಲಿದೆ. ಅಲ್ಲಿಯ ತನಕ ಮುಂಗಾರು ಮಳೆ ಮುಳೆ ಮುಂದುವೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಅ. 10ರವರೆಗೆ ಭಾರೀ ಮಳೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಉತ್ತರಾಖಂಡ, ಉತ್ತರ ಪ್ರದೇಶ, ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಕೊಂಕಣ-ಗೋವಾ, ಮಹಾರಾಷ್ಟ್ರ, ಮರಾಠವಾಡ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕ, ಬಿಹಾರ, ಮಧ್ಯಪ್ರದೇಶ, ಗುಜರಾತ್, ವಿದರ್ಭ, ಛತ್ತೀಸ್‌ಗಢ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್, ಪಂಜಾಬ್, ಹಿಮಾಚಲ ಪ್ರದೇಶ, ರಾಜಸ್ಥಾನ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.