AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ; ಹಳದಿ ಅಲರ್ಟ್​ ಘೋಷಣೆ

Weather Updates: ಮುಂದಿನ 3 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ.

Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ; ಹಳದಿ ಅಲರ್ಟ್​ ಘೋಷಣೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 13, 2022 | 5:46 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಮಳೆಯಾಗುತ್ತಿದೆ. ಇಂದಿನಿಂದ 3 ದಿನ ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ (Yellow Alert) ಘೋಷಿಸಿದೆ. ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ‘ಹಳದಿ’ ಅಲರ್ಟ್ ನೀಡಿದೆ.

ಮುಂದಿನ 3 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಉತ್ತರ ತಮಿಳುನಾಡು ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀವರೆಗೆ ವಿಸ್ತರಿಸಿದೆ. ಕರ್ನಾಟಕದ ಒಳನಾಡಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ತೇವಾಂಶದ ವಾತಾವರಣವಿರಲಿದೆ. ಹವಾಮಾನ ಇಲಾಖೆಯ ಪ್ರಕಾರ, ಇಂದು ಕರ್ನಾಟಕದ ಒಳನಾಡಿನ ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Koppal rain: ಕೊಪ್ಪಳದಲ್ಲಿ ಭಾರೀ ಮಳೆಗೆ ಕೊಚ್ಚಿಹೋದ ರಸ್ತೆ | video

ರಾಜ್ಯದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೋಲಾರ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 5ರವರೆಗೆ ಉತ್ತರ ಕನ್ನಡ, ಶಿವಮೊಗ್ಗ, ಬೀದರ್, ಕಲಬುರ್ಗಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳು ಕಳೆದ ವರ್ಷದ ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಮಳೆ ಕೊರತೆಯನ್ನು ಎದುರಿಸಿತ್ತು. ಆದರೆ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರೀ ಮಳೆ

ಇಂದಿನಿಂದ ಅ. 15ರವರೆಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ತುಮಕೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಗೋವಾ, ಕೇರಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಧ್ಯಪ್ರದೇಶ, ಬಿಹಾರ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು