Karnataka Rain: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ; ಅಸ್ಸಾಂನಲ್ಲಿ ರೆಡ್ ಅಲರ್ಟ್​ ಘೋಷಣೆ

Monsoon 2022: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂನಲ್ಲಿ ಇನ್ನೂ 4 ದಿನಗಳವರೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ; ಅಸ್ಸಾಂನಲ್ಲಿ ರೆಡ್ ಅಲರ್ಟ್​ ಘೋಷಣೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 16, 2022 | 5:40 AM

Karnataka Weather Today: ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ರಾಜ್ಯದ ಬಹುತೇಕ ಕಡೆ ಮಳೆ ಸುರಿಯಲಿದೆ. ನಿನ್ನೆ ಸಂಜೆಯಿಂದಲೇ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಬೆಂಗಳೂರು, ಮೈಸೂರಿನಲ್ಲಿ ಮಳೆಯಾಗಿದೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ (ಜೂನ್ 16) ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇನ್ನೆರಡು ದಿನ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರದ‌ಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ
Image
Karnataka Rain: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮುಂಗಾರು ಆರ್ಭಟ; ಬೆಂಗಳೂರಿನಲ್ಲಿ ಇಂದು ಚದುರಿದ ಮಳೆ
Image
Karnataka Rain: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲಿ ನಾಳೆಯಿಂದ ಭಾರೀ ಮಳೆ
Image
Karnataka Rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ; ಇನ್ನೂ 3 ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆ;

ಕರ್ನಾಟಕದ ಮಲೆನಾಡು, ಅರೆ ಬಯಲು ಸೀಮೆ ಪ್ರದೇಶದಲ್ಲಿ ಮುಂಗಾರು ಮಳೆ ನಿಧಾನವಾಗಿ ಪ್ರವೇಶಿಸುತ್ತಿದೆ. ಇಂದಿನಿಂದ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯ ತೀವ್ರತೆ ಹೆಚ್ಚಾಗಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಬಿರುಸು ಪಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲಿ ನಾಳೆಯಿಂದ ಭಾರೀ ಮಳೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ಈಗಾಗಲೇ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುತ್ತಿದೆ. ಅಸ್ಸಾಂನಲ್ಲಿ ಇನ್ನೂ 4 ದಿನಗಳವರೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 4 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ಮಳೆಯ ಚಟುವಟಿಕೆಯು ಕ್ರಮೇಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್, ಬಿಹಾರ, ಉತ್ತರಾಖಂಡ, ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಕೇರಳ ಮತ್ತು ಮಾಹೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಉತ್ತರಾಖಂಡ, ಹಿಮಾಚಲ ಪ್ರದೇಶ, ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಒಡಿಶಾ, ಜಾರ್ಖಂಡ್, ಬಿಹಾರ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಪೂರ್ವ ಮಧ್ಯಪ್ರದೇಶ, ಕೊಂಕಣ, ಗೋವಾ, ಛತ್ತೀಸ್‌ಗಢ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನ ಕಂಗಾಲು; ಇನ್ನೂ 3 ದಿನ ಹಳದಿ ಅಲರ್ಟ್​ ಘೋಷಣೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರ ಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ವಿದರ್ಭ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು