AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಲ್ಲಿ ನಿಲ್ಲದ ಮಳೆಯ ಅಬ್ಬರ; ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್​ ಘೋಷಣೆ

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕೊಂಚ ಕಡಿಮೆಯಾಗಿದೆ. ಇನ್ನೆರಡು ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rain: ಕರ್ನಾಟಕದಲ್ಲಿ ನಿಲ್ಲದ ಮಳೆಯ ಅಬ್ಬರ; ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್​ ಘೋಷಣೆ
ಮಳೆImage Credit source: PTI
TV9 Web
| Edited By: |

Updated on: Oct 04, 2022 | 6:19 AM

Share

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರ್ನಾಟಕದ (Karnataka Rain) ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಕೂಡ 2 ದಿನಗಳಿಂದ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕೊಂಚ ಕಡಿಮೆಯಾಗಿದೆ. ಇನ್ನೆರಡು ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದು, ಚಳಿಯ ವಾತಾವರಣ ಹೆಚ್ಚಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅಂತ್ಯ, ಆದರೂ ಅ.15ರವರೆಗೆ ಮಳೆ ಅಬ್ಬರ ಸಾಧ್ಯತೆ

ಇಂದು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದು ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಒಡಿಶಾ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ಕೇರಳದಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.

ಅಕ್ಟೋಬರ್ 5ರಂದು ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಅ. 5ರಂದು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅಕ್ಟೋಬರ್ 6 ಮತ್ತು 7ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ