Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆ
Karnataka Weather Today: ಮಹಾರಾಷ್ಟ್ರದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲೂ ಮಳೆಯಾಗಲಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
Bengaluru Rain: ಕರ್ನಾಟಕದಲ್ಲಿ ಮಳೆ ಮುಂದುವರೆದಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ಉತ್ತರ ಕನ್ನಡದ ಯಲ್ಲಾಪುರ, ಸಿದ್ಧಾಪುರ, ಶಿರಸಿ, ಶಿವಮೊಗ್ಗದ ತೀರ್ಥಹಳ್ಳಿ, ಸಾಗರ, ಹೊಸನಗರ, ದಕ್ಷಿಣ ಕನ್ನಡದ ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಪುತ್ತೂರಿನ ಸುತ್ತಮುತ್ತ ಮಳೆ ಸುರಿದಿದೆ. ಇಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿಯಲ್ಲಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 28ರವರೆಗೆ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕಕ್ಕೂ ಮಳೆಯ ಪರಿಣಾಮ ತಟ್ಟಲಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 28ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ ಭಾಗದಲ್ಲಿ ಇಂದು ಗುಡುಗು, ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ಇನ್ನೆರಡು ದಿನ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್ 28ರವರೆಗೆ ಮಳೆಯಾಗಲಿದೆ.
ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದೆ. ಇಂದು ಮತ್ತು ನಾಳೆ (ಮಾರ್ಚ್ 28) ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಜಾಸ್ತಿ ತಾಪಮಾನ ಉಂಟಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಮಾರ್ಚ್ 28ರವರೆಗೆ ಚದುರಿದ ಮಳೆಯಾಗಲಿದೆ. ಮುಂದಿನ ಸೋಮವಾರದ ನಂತರವೂ ಈ ರಾಜ್ಯಗಳಲ್ಲಿ ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಲಿದೆ. ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ.
ಇಂದು ಅರುಣಾಚಲ ಪ್ರದೇಶ ಮತ್ತು ಕೇರಳದಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯ ನಿರೀಕ್ಷೆಯಿದೆ. ಮುಂದಿನ 4 ದಿನಗಳಲ್ಲಿ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಮೇಲೆ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 28ರಿಂದ 30ರ ಅವಧಿಯಲ್ಲಿ ದಕ್ಷಿಣ ಹರಿಯಾಣ, ಪಶ್ಚಿಮ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಉಂಟಾಗಲಿದೆ.
ಇದನ್ನೂ ಓದಿ: Karnataka Rain: ಮಾ. 28ರವರೆಗೆ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ಹಲವೆಡೆ ಮಳೆ; ಹವಮಾನ ಇಲಾಖೆ ಮುನ್ಸೂಚನೆ