AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಮತ್ತೆ ಮಳೆ ಶುರು; ಹಲವೆಡೆ ಹಳದಿ ಅಲರ್ಟ್ ಘೋಷಣೆ

Bengaluru Rain: ಇಂದಿನಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rain: ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಮತ್ತೆ ಮಳೆ ಶುರು; ಹಲವೆಡೆ ಹಳದಿ ಅಲರ್ಟ್ ಘೋಷಣೆ
ಮಳೆ
TV9 Web
| Edited By: |

Updated on: Oct 07, 2022 | 5:53 AM

Share

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರು (Bengaluru Rains) ಸೇರಿದಂತೆ 8 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮತ್ತೆ ಶುರುವಾಗಲಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 8ರವರೆಗೆ ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಇಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿ 8 ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆ (IMD) ಯ ತಾಜಾ ಮುನ್ಸೂಚನೆಗಳ ಪ್ರಕಾರ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದಿನಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 10ರಂದು ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಪ್ಪಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಭಾಗಗಳಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದಿನಿಂದ ಅಕ್ಟೋಬರ್ 8ರವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತಿ ಮಳೆ ಬೀಳುವ ಪ್ರದೇಶಗಳಲ್ಲಿರುವ ಜನರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಮುಂದಿನ ಮೂರು ದಿನ ಒಡಿಶಾ, ಆಂಧ್ರಪ್ರದೇಶದ ಕರಾವಳಿಯಲ್ಲಿ ವರುಣ ಅಬ್ಬರಿಸಲಿದ್ದಾನೆ. ಇದರ ಜೊತೆ ಛತ್ತೀಸ್​​ಗಢ ಮತ್ತು ಮಧ್ಯ ಪ್ರದೇಶದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಮಲೆನಾಡಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಪ್ರದೇಶಗಳು, ಮಧ್ಯಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಒಡಿಶಾ, ಜಾರ್ಖಂಡ್, ಬಿಹಾರ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್ ಪ್ರದೇಶದಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಿಮಾಲಯ ಪ್ರದೇಶದಲ್ಲಿ ಮುಂಜಾನೆ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ