Karnataka Rain: ಕರ್ನಾಟಕದಲ್ಲಿ ಹಿಂಗಾರು ಮಳೆ ಆರಂಭ; ನಾಳೆಯಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ
Bangalore Rains: ನವೆಂಬರ್ 2ರಿಂದ ನವೆಂಬರ್ 4ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಕಳೆದ ತಿಂಗಳು ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಆದರೆ, ಕಳೆದ 10 ದಿನಗಳಿಂದ ಕರ್ನಾಟಕದ (Rain in Karnataka) ಎಲ್ಲೆಡೆ ವರುಣನ ಆರ್ಭಟ ಕಡಿಮೆಯಾಗಿತ್ತು. ಇದೀಗ ನಾಳೆಯಿಂದ (ನ. 2) ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ (Monsoon) ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ನವೆಂಬರ್ 2ರಿಂದ ನವೆಂಬರ್ 4ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ನವೆಂಬರ್ 2ರಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ
ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 4 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ತಮಿಳುನಾಡಿನಲ್ಲಿ ಮುಂದಿನ 3 ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಣಿಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಮುಂದಿನ 2 ದಿನಗಳವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಮತ್ತು ನವೆಂಬರ್ 2ರಂದು ಪುದುಚೇರಿ ಮತ್ತು ಕೇರಳದ ಮಾಹೆಗೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.
ಇದನ್ನೂ ಓದಿ: ಹಿಂಗಾರು ಆರ್ಭಟವೂ ಜೋರು: ನ 2ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಮುಂದಿನ 3 ದಿನಗಳ ಕಾಲ ಅಂದರೆ ನವೆಂಬರ್ 3ರವರೆಗೆ ಭಾರೀ ಮಳೆಯಾಗಲಿದೆ. ನವೆಂಬರ್ 3ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ತೆಲಂಗಾಣ, ರಾಯಲಸೀಮಾ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶದ ಹಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಬೀಳುವ ಸಾಧ್ಯತೆ ಇದೆ.