Karnataka Rain: ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ ಹೆಚ್ಚಳ
Weather Forecast: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಚದುರಿದ ವ್ಯಾಪಕ ಮಳೆಯಾಗಲಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದೆ. ಆದರೆ, ಮೋಡ ಕವಿದ ವಾತಾವರಣ ಮುಂದುವರೆದಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ ಸುರಿಯುವ ನಿರೀಕ್ಷೆಯಿದೆ. ಇದರ ಜೊತೆ ಚಳಿಯೂ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು (Malnad), ಕರಾವಳಿಯ (Coastal Karnataka) ಸುಮಾರು 20 ಜಿಲ್ಲೆಗಳಲ್ಲಿ ಇಂದು (ನ. 17) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಚದುರಿದ ವ್ಯಾಪಕ ಮಳೆಯಾಗಲಿದೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ ಮುಂದುವರೆದ ಭಾರೀ ಮಳೆ: ನ.16ರ ವರೆಗೂ ಮಳೆ ಸಾಧ್ಯತೆ, ಮೈಲಾಡುತುರೈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಕೊಂಚ ಚುರುಕಾಗಲಿದೆ.
IMD ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮಲೆನಾಡು ಪ್ರದೇಶಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಗೇ ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ನಿರಂತರ ಮಳೆಯಾಗಲಿದೆ.
ಇಂದು ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿರುತ್ತದೆ.
ಇದನ್ನೂ ಓದಿ: Karnataka Rain: ಕರ್ನಾಟಕದ 20 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು. ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಅರುಣಾಚಲ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಹಿಮಾಲಯ ಪ್ರದೇಶದಲ್ಲಿ ಹಿಮ ಬೀಳುವ ಸಾಧ್ಯತೆ ಇದೆ. ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಆಂಧ್ರಪ್ರದೇಶಗಳಿಗೂ ಹವಾಮಾನ ಸಂಸ್ಥೆ ಹಳದಿ ಅಲರ್ಟ್ ನೀಡಿದೆ. ನವೆಂಬರ್ 20ರಿಂದ ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.