AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

Bangalore Rains: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ
ಬೆಂಗಳೂರು ಮಳೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 03, 2022 | 6:25 AM

Share

Bengaluru Rain: ಬೆಂಗಳೂರು: ಕರ್ನಾಟಕದ (Rain in Karnataka) ಬೆಂಗಳೂರು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೊಮ್ಮೆ ಗುಡುಗು – ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ತಾಪಮಾನದಲ್ಲಿಯೂ ವ್ಯತ್ಯಾಸಗಳಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Chennai Rain: ಭಾರೀ ಮಳೆಯಿಂದ ಚೆನ್ನೈ ಜನಜೀವನ ಅಸ್ತವ್ಯಸ್ತ; ಕೆರೆಯಂತಾದ ರಸ್ತೆಗಳಲ್ಲಿ ಜನರ ಪರದಾಟ

ಇಂದಿನಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 4 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ತಮಿಳುನಾಡಿನ ಚೆನ್ನೈ ಸೇರಿದಂತೆ ಹಲವೆಡೆ ಇಂದು ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಚೆನ್ನೈ ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚೆನ್ನೈ ಮಾತ್ರವಲ್ಲ ಅಕ್ಕಪಕ್ಕದ ಜಿಲ್ಲೆಗಳಾದ ತಿರುವಳ್ಳುವರ್, ಕಾಂಚೀಪುರಂ ಹಾಗೂ ಚೆಂಗಲ್‌ಪಟ್ಟು ಜಿಲ್ಲೆಗಳಲ್ಲೂ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Bengaluru Rain: ಬೆಂಗಳೂರು, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ; ತಗ್ಗು ಪ್ರದೇಶಗಳಲ್ಲಿ ಹೈ ಅಲರ್ಟ್​

ಇಂದು ಕರಾವಳಿ ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ರಾಯಲಸೀಮಾ, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಕೊಂಕಣ, ಗೋವಾ, ತೆಲಂಗಾಣ ಮತ್ತು ಉತ್ತರ ಆಂತರಿಕ ಕರ್ನಾಟಕದ ಮೇಲೆ ಮಿಂಚು ಸಹಿತ ಮಳೆಯ ಮುನ್ಸೂಚನೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ