AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು, ಶಿವಮೊಗ್ಗ ಸೇರಿ 12 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ; ಹಳದಿ ಅಲರ್ಟ್​ ಘೋಷಣೆ

Bangalore Rains: ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ ಸೇರಿದಂತೆ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Rain: ಬೆಂಗಳೂರು, ಶಿವಮೊಗ್ಗ ಸೇರಿ 12 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ; ಹಳದಿ ಅಲರ್ಟ್​ ಘೋಷಣೆ
ಮಳೆ
TV9 Web
| Edited By: |

Updated on: Oct 02, 2022 | 6:26 AM

Share

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಹಗುರ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ಕೂಡ ಮಳೆ (Rainfall) ಮುಂದುವರೆಯಲಿದೆ. ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ ಸೇರಿದಂತೆ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಮಲೆನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಇಂದು (ಅ. 2) ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಕಲಬುರ್ಗಿ, ತುಮಕೂರಿನಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. ಇನ್ನೆರಡು ದಿನ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಇಂದು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿಯೂ ಇಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಕೆಲವು ಭಾಗಗಳಲ್ಲಿ ಅಕ್ಟೋಬರ್‌ನಿಂದ ಸ್ವಲ್ಪ ಮಳೆ ಬೀಳಬಹುದು ಎಂದು ತಾಜಾ ಹವಾಮಾನ ಮುನ್ಸೂಚನೆಗಳು ತಿಳಿಸಿವೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಉತ್ತರ ಒಳಭಾಗ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ