ಬೆಂಗಳೂರು: ಕರ್ನಾಟಕದಾದ್ಯಂತ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ (Bangalore Rains) ಕೂಡ ಪ್ರವಾಹದ (Karnataka Flood) ಆತಂಕ ಎದುರಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಸೆ. 2ರವರೆಗೂ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಈ ವಾರಪೂರ್ತಿ ಸಂಜೆಯ ಬಳಿಕ ಮಳೆ ಆರ್ಭಟಿಸುವ ಸಾಧ್ಯತೆಯಿದೆ.
ಇನ್ನೆರಡು ದಿನಗಳ ಕಾಲ ಕರ್ನಾಟಕದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ: ಜಿಲ್ಲೆಯ ಹಲವು ಕಡೆ ಅವಾಂತರ, ಗಣೇಶ ಹಬ್ಬದ ಸಂಭ್ರಮದಲ್ಲಿರ ಬೇಕಿದ್ದ ಜನರಿಗೆ ಜಲ ಕಂಟಕ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಇನ್ನೆರಡು ದಿನ ಜೋರಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಿಗೆ ಸೆ. 2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನದಲ್ಲಿ ಉಂಟಾದ ವೈಪರೀತ್ಯಗಳಿಂದ ಕರ್ನಾಟಕದ ಎಲ್ಲ ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೆ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಹಲವೆಡೆ ಇನ್ನೂ 2 ದಿನ ಮಳೆ ಅಬ್ಬರಿಸಲಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಅರಬ್ಬಿ ಸಮುದ್ರದ ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿರುವುದರಿಂದ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ.
ಇದನ್ನೂ ಓದಿ: Karnataka Rain: ಭಾರೀ ಮಳೆಯಿಂದ ಕೆರೆಯಂತಾದ ಬೆಂಗಳೂರು; ರಾಜ್ಯಾದ್ಯಂತ ಹಬ್ಬದ ದಿನವೂ ನಿಲ್ಲದ ವರುಣನ ಆರ್ಭಟ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರ್ಗಿ, ಗದಗ, ಹಾವೇರಿ, ರಾಯಚೂರು ಮತ್ತು ದಕ್ಷಿಣ ಒಳನಾಡಿನ ಜಿಲ್ಲಾಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಗೋವಾ, ಲಕ್ಷದ್ವೀಪ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಉತ್ತರಾಖಂಡ, ಉತ್ತರ ಪ್ರದೇಶ, ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ರಾಜಸ್ಥಾನ, ಗುಜರಾತ್ ಮತ್ತು ತೆಲಂಗಾಣದಲ್ಲಿ ಕೂಡ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.