Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದೂ ಕೂಡ ಮಳೆ ಸಾಧ್ಯತೆ

Karnataka Weather Today: ಕರ್ನಾಟಕದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲೂ ಇನ್ನೆರಡು ದಿನ ಅಲ್ಲಲ್ಲಿ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆಯು ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ‘ಆರೆಂಜ್ ಅಲರ್ಟ್​’ ನೀಡಿದೆ.

Karnataka Rain: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದೂ ಕೂಡ ಮಳೆ ಸಾಧ್ಯತೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 14, 2022 | 5:54 AM

ಬೆಂಗಳೂರು: ಕರ್ನಾಟಕದಲ್ಲಿ ಕಳೆದೆರಡು ದಿನಗಳಿಂದ ಕಡಿಮೆಯಾಗಿದ್ದ ಮಳೆ ನಿನ್ನೆ ಸಂಜೆಯಿಂದ ಮತ್ತೆ ಶುರುವಾಗಿದೆ. ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬುಧವಾರ ಸಂಜೆ (Rain in Karnataka) ಮಳೆಯಾಗಿದೆ. ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿತ್ತು. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲೂ ಇನ್ನೆರಡು ದಿನ ಅಲ್ಲಲ್ಲಿ ಮಳೆಯಾಗಲಿದೆ.

ನಿನ್ನೆ ಸಂಜೆ ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಉಂಟಾಗಿದೆ. ಶಾಂತಿನಗರ, ಕೋರಮಂಗಲ, ಆಡುಗೋಡಿ, ಮೆಜೆಸ್ಟಿಕ್, ಜೆ.ಸಿ. ನಗರ, ಜೆ.ಪಿ. ನಗರ. ಎಲೆಕ್ಟ್ರಾನಿಕ್ ಸಿಟಿ, ವಿಜಯನಗರ, ಬನಶಂಕರಿ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. ಕೆಲವೆಡೆ ರಸ್ತೆಯಲ್ಲೇ ನೀರು ಹರಿದಿದ್ದರಿಂದ ತೊಂದರೆ ಉಂಟಾಗಿದೆ. ಮಂಡ್ಯ ನಗರದಲ್ಲಿ ಮೊದಲ‌ ಮಳೆ ಕೊಂಚ ಜೋರಾಗೆ ಆರ್ಭಟಿಸಿದೆ. ಈ ಹಿಂದೆ ಜಿಲ್ಲೆಯ ಹಲವೆಡೆ ಮಳೆ ಬಿದ್ದಿತ್ತಾದರೂ ಮಂಡ್ಯ ನಗರದಲ್ಲಿ ಸೋನೆ ಮಳೆಯಷ್ಟೇ ಆಗಿತ್ತು. ಆದರೆ ಬುಧವಾರ ಮಧ್ಯಾಹ್ನ ದಿಢೀರನೆ ಶುರುವಾದ ಮಳೆಯು ಬಿರುಗಾಳಿ ಸಹಿತ 45 ನಿಮಿಷಗಳಿಗೂ ಹೆಚ್ಚು ಕಾಲ ಜೋರಾಗಿ ಸುರಿಯಿತು.

ಬಂಗಾಳ ಕೊಲ್ಲಿಯಿಂದ ಈಶಾನ್ಯ ರಾಜ್ಯಗಳಿಗೆ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಬಲವಾದ ನೈಋತ್ಯ ಮಾರುತಗಳ ಪ್ರಭಾವದ ಹಿನ್ನೆಲೆಯಲ್ಲಿ ಮುಂದಿನ 5 ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆಯು ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ‘ಆರೆಂಜ್ ಅಲರ್ಟ್​’ ನೀಡಿದೆ. ಪೂರ್ವ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಐದು ದಿನಗಳ ಮಳೆ 500 ಮಿ.ಮೀ. ಮಳೆಯಾಗಲಿದೆ. ಏ. 16ರವರೆಗೆ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತದ ಚಲನೆ ಉಂಟಾಗಲಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಅಥವಾ ಮಿಂಚಿನ ಜೊತೆಗೆ ವ್ಯಾಪಕವಾದ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಆಂಧ್ರಪ್ರದೇಶದ ಕರಾವಳಿಯಲ್ಲೂ ಮಳೆಯಾಗಲಿದೆ. ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ವಿಪರೀತ ಮಳೆಯಾಗಲಿದೆ. ಇಂದು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಿಕ್ಕಿಂ ಮತ್ತು ಕೇರಳದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಮಳೆ, ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಸಿಗಾಳಿ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಚದುರಿದ ಮಳೆ; ಕೇರಳದಲ್ಲಿ ಹಳದಿ ಅಲರ್ಟ್​ ಘೋಷಣೆ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ