Karnataka Rain: ಭಾರೀ ಮಳೆಗೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ತತ್ತರ; ಕರಾವಳಿಗೆ ಆರೆಂಜ್ ಅಲರ್ಟ್​

ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಮುಂದಿನ 4 ದಿನಗಳವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಭಾರೀ ಮಳೆಗೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ತತ್ತರ; ಕರಾವಳಿಗೆ ಆರೆಂಜ್ ಅಲರ್ಟ್​
ಕೊಡಗಿನಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 05, 2022 | 5:56 AM

Monsoon 2022: ಕರ್ನಾಟಕದಲ್ಲಿ ವರುಣನ ಆರ್ಭಟ (Karnataka Rains) ಜೋರಾಗಿದ್ದು, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈಗಾಗಲೇ ಕೊಡಗಿನಲ್ಲಿ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ (Coastal Karnataka) ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡಕ್ಕೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಮುಂದಿನ 4 ದಿನಗಳವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿಯೂ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ.

ಕೊಡಗಿನಲ್ಲೂ ಭೂ ಕುಸಿತ: ಕೊಡಗು ಜಿಲ್ಲೆಯಲ್ಲಿ ಮಳೆಗೆ ವಿವಿಧೆಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಮಳೆ ಹೆಚ್ಚಾಗುತ್ತಿರುವುದರಿಂದ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಮಡಿಕೇರಿ ಜಿಲ್ಲೆಯ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ರಸ್ತೆ ಮೇಲೆ ನೀರು ಹರಿಯುತ್ತಿದ್ದು, ನಾಪೋಕ್ಲು- ಭಾಗಮಂಡಲ ಸಂಪರ್ಕ ಕಡಿತಗೊಂಡಿದೆ. ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ: ಕಳೆದೊಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಇಂದು ಕೂಡ ಮುಂದುವರಿದ್ದು, ಸುಬ್ರಹ್ಮಣ್ಯ, ಬೆಳ್ತಂಗಡಿ, ಬಂಟ್ವಾಳ ಮುಂತಾದೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಳ್ತಂಗಡಿಯಲ್ಲಿ ಈ ವರ್ಷವೂ ಪ್ರವಾಹದ ಆತಂಕ ಎದುರಾಗಿದೆ. ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸುಳ್ಯ ತಾಲ್ಲೂಕಿನ ಕಡಬ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಮಳೆ ಅವಾಂತರ ಮುಂದುವರಿದೆ. ಹಲವೆಡೆ ಮಣ್ಣು ಕುಸಿತ ಮುಂದುವರಿದಿದೆ. ಹಲವು ಕಡೆ ಮರಗಳು ಧರೆಗುರುಳಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರಿದ ಭಾರೀ ಮಳೆ! ದಕ್ಷಿಣ ಕನ್ನಡದಲ್ಲಿ ಕೆಲ ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಕನ್ನಡದಲ್ಲೂ ಭಾರೀ ಮಳೆ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಾಗುತ್ತಿದ್ದು, ಸೋಮವಾರ ಮನೆಯ ಮೇಲೆ ಮರ ಬಿದ್ದು 6 ಜನರಿಗೆ ಗಾಯವಾಗಿದೆ. ಮಳೆಯ ಅಬ್ಬರಕ್ಕೆ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡನ ಘಟ್ಟದಲ್ಲಿ ಗುಡ್ಡ ಕುಸಿತವಾಗಿ ರಾಷ್ಟ್ರೀಯ ಹೆದ್ದಾರಿ ಎನ್‍ಹೆಚ್4ರ ಗೋವಾ-ಅನಮೋಡ ರಸ್ತೆ ತಾತ್ಕಾಲಿಕ ಸ್ಥಗಿತವಾಗಿದೆ. ಉತ್ತರ ಕನ್ನಡದ ಭಟ್ಕಳ, ಹೊನ್ನಾವರ, ಅಂಕೋಲ, ಜೋಯಿಡಾ, ಕುಮಟಾ, ಕಾರವಾರ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ.

ಚಿಕ್ಕಮಗಳೂರಿನಲ್ಲಿ ಸೇತುವೆ ಕುಸಿತ: ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ‌. ಕಳಸ ತಾಲೂಕಿನ ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಿಂದ ಭದ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಕಳಸ ಸಮೀಪದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದರಿಂದ ಕಳಸ- ಹೊರನಾಡು ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಇಲ್ಲಿನ ಮೂಡಿಗೆರೆ, ಕೊಪ್ಪ, ಎನ್. ಆರ್. ಪುರ, ಶೃಂಗೇರಿ, ಚಿಕ್ಕಮಗಳೂರು, ಕಳಸ, ತರೀಕೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಇದನ್ನೂ ಓದಿ: India Rain Updates: ಕರ್ನಾಟಕ, ಕೇರಳ, ಉತ್ತರಾಖಂಡ್ ಸೇರಿ 4 ರಾಜ್ಯಗಳಲ್ಲಿ ಮುಂದಿನ 4 ದಿನ ಭಾರಿ ಮಳೆ

ಇಂದು ಯಾವೆಲ್ಲ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ ಮಾತ್ರವಲ್ಲದೆ ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಮಾಹೆ, ಗುಜರಾತ್, ಉತ್ತರಾಖಂಡ, ಛತ್ತೀಸ್‌ಗಢ, ವಿದರ್ಭ, ಮಧ್ಯಪ್ರದೇಶ ಮತ್ತು ಒಡಿಶಾದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್, ಮಹಾರಾಷ್ಟ್ರ, ಆಂಧ್ರಪ್ರದೇಶ, ಯಾನಂ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆಯಾಗಲಿದೆ. ಇಂದು ಕೇರಳದ 11 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲೂ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಕೊಂಕಣ, ಗೋವಾ, ವಿದರ್ಭ, ಛತ್ತೀಸ್‌ಗಢ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಜಾರ್ಖಂಡ್, ಹರಿಯಾಣ, ಚಂಡೀಗಢ, ದೆಹಲಿ, ಗುಜರಾತ್, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತೆಲಂಗಾಣದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬಿಹಾರ, ಉತ್ತರ ಪ್ರದೇಶ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಕರಾವಳಿ ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಮುನ್ಸೂಚನೆ ಇದೆ. ರಾಯಲಸೀಮೆಯಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್