Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಏ. 9ರವರೆಗೂ ಗುಡುಗು ಸಹಿತ ಮಳೆ

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಏ. 9ರವರೆಗೂ ಗುಡುಗು ಸಹಿತ ಮಳೆ
ಮಳೆ

Karnataka Weather Today: ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಏಪ್ರಿಲ್ 9ರವರೆಗೂ ಮಳೆಯಾಗಲಿದೆ.

TV9kannada Web Team

| Edited By: Sushma Chakre

Apr 07, 2022 | 5:52 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಏ. 9ರವರೆಗೂ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕಳೆದೊಂದು ವಾರದಿಂದ ಕರ್ನಾಟಕದಲ್ಲಿ (Rain in Karnataka) ಮಳೆಯಾಗುತ್ತಿದ್ದು, ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣೆಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ತಮಿಳುನಾಡಿನ (Tamil Nadu Rains) ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ (Karnataka Weather Today) ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದಿನಿಂದ ಏ. 9ರವರೆಗೆ ಮಳೆ ಮುಂದುವರೆಯಲಿದೆ.

ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಏಪ್ರಿಲ್ 9ರವರೆಗೂ ಮಳೆಯಾಗಲಿದೆ. ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 3 ದಿನ ಗುಡುಗು ಸಹಿತ ಮಳೆಯಾಗಲಿದೆ.

ಮುಂದಿನ 3 ದಿನಗಳಲ್ಲಿ ಬಂಗಾಳಕೊಲ್ಲಿಯಿಂದ ಬಲವಾದ ನೈಋತ್ಯ ಮಾರುತಗಳು ಅರುಣಾಚಲ ಪ್ರದೇಶ, ಅಸ್ಸಾಂ-ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ವ್ಯಾಪಕ ಮಳೆಯನ್ನು ಉಂಟುಮಾಡುತ್ತದೆ ಎಂದು IMD ತಿಳಿಸಿದೆ. ಬಂಗಾಳ ಕೊಲ್ಲಿಯಿಂದ ತೇವಾಂಶವುಳ್ಳ ನೈಋತ್ಯ ಮಾರುತಗಳು ಈಶಾನ್ಯ ಭಾರತದಾದ್ಯಂತ ಹಲವಾರು ದಿನಗಳವರೆಗೆ ವ್ಯಾಪಕವಾದ ಮಳೆಯನ್ನು ಉಂಟುಮಾಡುತ್ತವೆ. ಇದರಿಂದ ಸ್ಥಳೀಯವಾಗಿ ಭಾರೀ ಮಳೆಯಾಗುತ್ತದೆ. ವಿಶೇಷವಾಗಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆ ಆರಂಭವಾಗಿದೆ. ಮುಂದಿನ 4 ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ 4 ದಿನಗಳಲ್ಲಿ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಮಾಹೆಯಲ್ಲಿ ಮುಂದಿನ 4 ದಿನಗಳಲ್ಲಿ ಗುಡುಗು ಮತ್ತು ಮಿಂಚಿನ ಆರ್ಭಟ ಇರಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದಲ್ಲೂ ಇದೇ ವಾತಾವರಣವಿರಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಬೆಂಗಳೂರು, ಕೊಡಗು ಸೇರಿ ಹಲವೆಡೆ ಮಳೆ; ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು, ಕೊಡಗು, ಮೈಸೂರಿನಲ್ಲಿಂದು ಗುಡುಗು ಸಹಿತ ಮಳೆ

Follow us on

Related Stories

Most Read Stories

Click on your DTH Provider to Add TV9 Kannada