AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆ; ಒಡಿಶಾದಲ್ಲಿ ಚಂಡಮಾರುತದ ಎಚ್ಚರಿಕೆ

Cyclone Asani: ಒಡಿಶಾ, ಅಂಡಮಾನ್​ನಲ್ಲಿ ಅಸಾನಿ ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವೆಡೆ, ಕರಾವಳಿ ಪ್ರದೇಶ ಮತ್ತು ಉತ್ತರ ಒಳನಾಡಿನಲ್ಲಿಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆ; ಒಡಿಶಾದಲ್ಲಿ ಚಂಡಮಾರುತದ ಎಚ್ಚರಿಕೆ
ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: May 08, 2022 | 6:01 AM

Share

ಬೆಂಗಳೂರು: ಈಗಾಗಲೇ ಒಡಿಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಅಂಡಮಾನ್ ದ್ವೀಪದಲ್ಲಿ ಅಸಾನಿ ಚಂಡಮಾರುತದ (Cyclone Asani) ಮುನ್ಸೂಚನೆ ನೀಡಲಾಗಿದೆ. ಇದರ ಜೊತೆಗೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ 2 ದಿನ ಕರ್ನಾಟಕದಲ್ಲಿ ವರುಣನ ಆರ್ಭಟ ಇರಲಿದೆ. ಬೆಂಗಳೂರು (Bengaluru Rain) ಮಾತ್ರವಲ್ಲದೆ ಮಲೆನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮೇ 9ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೆರಡು ದಿನ (ಮೇ 9ರವರೆಗೆ) ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಕೂಡ ಇದೆ. ಈ ವೇಳೆ ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆಯೂ ಜೋರಾಗಿ ಮಳೆ ಸುರಿದಿದ್ದು, ಇಂದು ಸಂಜೆಯ ನಂತರವೂ ಮಳೆ ಅಬ್ಬರಿಸುವ ನಿರೀಕ್ಷೆಯಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಿಗ್ಗೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಿ, ಉಷ್ಣ ಅಲೆ ಉಂಟಾಗುವ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ 2 ದಿನ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಮೇ 10ರಂದು ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ತೆಲಂಗಾಣದಲ್ಲಿ ಮುಂದಿನ 3ರಿಂದ 4 ದಿನಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ನಂತರ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರದ ನಿರ್ದೇಶಕರಾದ ನಾಗರತ್ನ ತಿಳಿಸಿದ್ದಾರೆ.

ಮೇ 9ರಂದು ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 85 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೇ 10ರಂದು ಗಂಟೆಗೆ 100 ಕಿಮೀ ವೇಗದಲ್ಲಿ ಬೀಸುವ ಗಾಳಿಯ ವೇಗವು ಪಶ್ಚಿಮ ಕೇಂದ್ರ ಮತ್ತು ಪಕ್ಕದ ವಾಯುವ್ಯ ಮತ್ತು ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 3ರಿಂದ 4 ದಿನಗಳಲ್ಲಿ ಸಮುದ್ರದ ಪರಿಸ್ಥಿತಿಯು ಪ್ರಕ್ಷುಬ್ಧವಾಗಿರುತ್ತದೆ ಎಂದು IMD ಹವಾಮಾನ ಮುನ್ಸೂಚನಾ ಸಂಸ್ಥೆ ಎಚ್ಚರಿಸಿದೆ. ಹಾಗೇ ಮೇ 10ರವರೆಗೆ ಅಂಡಮಾನ್ ಸಮುದ್ರ ಮತ್ತು ಬಂಗಾಳಕೊಲ್ಲಿಗೆ ತೆರಳದಂತೆ ಮೀನುಗಾರರಿಗೆ ಸಲಹೆ ನೀಡಿದೆ.

ಅಸಾನಿ ಚಂಡಮಾರುತದ ಅಲರ್ಟ್:

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿರುವ ಹಿನ್ನೆಲೆಯಲ್ಲಿ ಪುರಿ, ಕಟಕ್ ಸೇರಿದಂತೆ ಒಡಿಶಾದ 18 ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಒಡಿಶಾ ಸರ್ಕಾರವು ಎನ್‌ಡಿಆರ್‌ಎಫ್‌ನ 17 ತಂಡಗಳು, ಒಡಿಆರ್‌ಎಫ್‌ನ 20 ತಂಡಗಳು ಮತ್ತು 175 ಅಗ್ನಿಶಾಮಕ ಸೇವಾ ತಂಡಗಳನ್ನು ನಿಯೋಜನೆ ಮಾಡಿದೆ. ಶುಕ್ರವಾರ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶವು ಚಂಡಮಾರುತವಾಗಿ ತೀವ್ರಗೊಂಡು ಮೇ 10ರಂದು ಆಂಧ್ರಪ್ರದೇಶ- ಒಡಿಶಾ ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ. ಇದರಿಂದಾಗಿ ಪೂರ್ವ ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತದೆ. ಈ ಚಂಡಮಾರುತ ಉತ್ತರಕ್ಕೆ ಭಾರತದ ಪೂರ್ವ ಕರಾವಳಿಯತ್ತ ಚಲಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೇ 10ರ ವೇಳೆಗೆ ಉತ್ತರ- ವಾಯುವ್ಯ ಮತ್ತು ಆಂಧ್ರ ಪ್ರದೇಶದ ಕರಾವಳಿ, ಒಡಿಶಾದ ಬಳಿ ಅಸಾನಿ ಚಂಡಮಾರುತ ಮುಂದುವರಿಯುವ ನಿರೀಕ್ಷೆಯಿದೆ. ಅಸಾನಿ ಚಂಡಮಾರುತ ಮೇ 10 ಮತ್ತು 11ರ ನಡುವೆ ವಿಶಾಖಪಟ್ಟಣ ಮತ್ತು ಭುವನೇಶ್ವರದ ನಡುವೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆಯಿದೆ.

IMD ಪ್ರಕಾರ, ಈ ಪ್ರದೇಶದಲ್ಲಿ ಗಂಟೆಗೆ 60 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಮುಂದಿನ ಮೂರು ದಿನಗಳ ಕಾಲ ಅಂಡಮಾನ್ ಸಮುದ್ರ ಮತ್ತು ಆಗ್ನೇಯ ಬಂಗಾಳಕೊಲ್ಲಿಗೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಮೇ 10ರಿಂದ ಒಡಿಶಾದಲ್ಲಿ ಭಾರೀ ಮಳೆ ಪ್ರಾರಂಭವಾಗಬಹುದು. ಆದರೆ, ನೆರೆಯ ರಾಜ್ಯಗಳಾದ ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದಲ್ಲೂ ಇದೇ ರೀತಿಯ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗಿದೆ. ಕೊಲ್ಕತ್ತಾದಲ್ಲಿ ಮೇ 10 ಮತ್ತು 13ರ ನಡುವೆ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮಳೆಯ ಕುರಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್