Karnataka Rain: ಬೆಂಗಳೂರಿನಲ್ಲಿ ಇಂದು ಭಾರೀ ಮಳೆ; ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ

Karnataka Weather Today: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Rain: ಬೆಂಗಳೂರಿನಲ್ಲಿ ಇಂದು ಭಾರೀ ಮಳೆ; ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ
ಮಳೆImage Credit source: Live Mint
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 30, 2022 | 5:41 AM

Bangalore Rains: ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಸಂಜೆಯ ಬಳಿಕ ಮಳೆ ಅಬ್ಬರ (Heavy Rainfall) ಹೆಚ್ಚಾಗುತ್ತಲೇ ಇದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆ (Bengaluru Rain) ಮುಂದುವರೆಯಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 1ರವರೆಗೆ ಮಳೆ (Rain in Karnataka) ಹೆಚ್ಚಾಗಲಿದೆ. ಇಂದು ಕರಾವಳಿ, ಮಲೆನಾಡಿನಲ್ಲಿ ಮಳೆಯಿಂದ ಆರೆಂಜ್ ಅಲರ್ಟ್ (Orange Alert)​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಇಂದು ಭಾರೀ ಮಳೆಯಾಗುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಮತ್ತು ಪಶ್ಚಿಮ ಘಟ್ಟದ ಪ್ರದೇಶಗಳಲ್ಲಿ ಕಳೆದ ವಾರದಿಂದ ಮಳೆಯಾಗುತ್ತಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯವರೆಗೆ ಕರ್ನಾಟಕದಾದ್ಯಂತ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ನಿಲ್ಲದ ಮಳೆಯ ಅಬ್ಬರ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಣೆ

ಇಂದು ಮತ್ತು ಜುಲೈ 1ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಇಂದು ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಮಲೆನಾಡು, ಕರಾವಳಿಯಲ್ಲಿ ಮಳೆಯಿಂದ ಜೂ. 30ರವರೆಗೆ ಆರೆಂಜ್ ಅಲರ್ಟ್​ ಘೋಷಣೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಪೂರ್ವ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕೊಂಕಣ, ಗೋವಾ, ಕೇರಳ, ಮಾಹೆ, ಲಕ್ಷದ್ವೀಪ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಉತ್ತರ ಪ್ರದೇಶ, ಉತ್ತರಾಖಂಡ್‌ಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಪೂರ್ವ ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲೂ ಮಳೆಯಾಗಲಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂಧ್ರಪ್ರದೇಶದ ಕರಾವಳಿ, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ ಮತ್ತು ವಿದರ್ಭದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್, ರಾಯಲಸೀಮಾ, ತೆಲಂಗಾಣ, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಸದನದಲ್ಲಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ಸದನದಲ್ಲಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ಹೊರಡುವ ಮುನ್ನ ಸುದೀಪ್, ಉಪೇಂದ್ರಗೆ ಶುಭ ಹಾರೈಸಿದ ಶಿವಣ್ಣ
ಹೊರಡುವ ಮುನ್ನ ಸುದೀಪ್, ಉಪೇಂದ್ರಗೆ ಶುಭ ಹಾರೈಸಿದ ಶಿವಣ್ಣ
ವಿರೋಧಪಕ್ಷದವರು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಬೇಕು: ಮುಖ್ಯಮಂತ್ರಿ
ವಿರೋಧಪಕ್ಷದವರು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಬೇಕು: ಮುಖ್ಯಮಂತ್ರಿ