Karnataka Rain: ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆ ಸಾಧ್ಯತೆ

Weather Today: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. 

Karnataka Rain: ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆ ಸಾಧ್ಯತೆ
ಕರ್ನಾಟಕದಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 20, 2022 | 6:21 AM

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ (Karnataka Rain) ವರುಣನ ಆರ್ಭಟ ಜೋರಾಗಿದೆ. ಮುಂದಿನ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ (Yellow Alert) ನೀಡಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು (ಗುರುವಾರ) ಭಾರೀ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ವರ್ಷ ಬೆಂಗಳೂರಿನಲ್ಲಿ 1,706 ಮಿಮೀ ದಾಖಲೆಯ ಮಳೆಯಾಗಿದೆ. ಈ ಮೂಲಕ ಬೆಂಗಳೂರಿನ ಮಳೆ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2017ರಲ್ಲಿ ಬೆಂಗಳೂರಿನಲ್ಲಿ 1,696 ಮಿಮೀ ಮಳೆ ದಾಖಲಾಗಿತ್ತು. ಆ ದಾಖಲೆಯನ್ನು ಈ ಬಾರಿಯ ಮಳೆ ಮುರಿದಿದೆ.

ಇದನ್ನೂ ಓದಿ: Karnataka Rain: ಮಲೆನಾಡು ಸೇರಿ ಕರ್ನಾಟಕದ 5 ಜಿಲ್ಲೆಗಳಲ್ಲಿ ಮತ್ತೆ ಮಳೆ; ಹಳದಿ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮಳೆಯಿಂದಾಗಿ 3,309 ಮನೆಗಳು ನಾಶವಾಗಿದ್ದು, 28 ಜಾನುವಾರುಗಳು ಸಾವನ್ನಪ್ಪಿವೆ. ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 1,330ಕ್ಕೂ ಹೆಚ್ಚು ಜನರಿಗೆ ಪರಿಹಾರ ಶಿಬಿರಗಳಲ್ಲಿ ಆಶ್ರಯ ನೀಡಿದೆ. ರಾಜ್ಯ ಸರ್ಕಾರ ಕರ್ನಾಟಕದಾದ್ಯಂತ 5 ಪರಿಹಾರ ಶಿಬಿರಗಳನ್ನು ತೆರೆದಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಮುಂಗಾರು ಮಳೆಯಿಂದ 9,90,957 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಈ ನಷ್ಟದಲ್ಲಿ 6,16,138 ಹೆಕ್ಟೇರ್‌ಗಳಲ್ಲಿ 8.83 ಲಕ್ಷ ರೈತರಿಗೆ 947.8 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ಇಂದು ಕರ್ನಾಟಕದಲ್ಲಿ ಮಾತ್ರವಲ್ಲದೆ ಮಾಹೆ ಮತ್ತು ಕೇರಳದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಕಾರೈಕಲ್, ಪುದುಚೇರಿ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗಲಿದೆ. ಯಾನಂ, ರಾಯಲಸೀಮಾ, ಜಮ್ಮು ಮತ್ತು ಕಾಶ್ಮೀರ, ಉತ್ತರ ಪಂಜಾಬ್‌ನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್