Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ
Mangaluru Rain: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.
ಬೆಂಗಳೂರು: ಕಳೆದೊಂದು ವಾರದಿಂದ ಕೊಂಚ ಶಾಂತವಾಗಿದ್ದ ಮಲೆನಾಡು ಮತ್ತು ಕರಾವಳಿಯಲ್ಲಿ ಮತ್ತೆ ಮಳೆಯ (Rainfall) ಅಬ್ಬರ ಹೆಚ್ಚಾಗಿದೆ. 2 ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಆರೆಂಜ್ ಅಲರ್ಟ್ (Orange Alert) ಮುಂದುವರೆದಿದೆ. ಇಂದು ಕೂಡ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ 8.30ರವರೆಗೆ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
#Monsoon Nodu Lane in Bejai flooded following heavy rains in #Mangaluru @XpressBengaluru @Cloudnirad @ramupatil_TNIE @DCDK9 @mangalurucorp pic.twitter.com/eGi6OM3VZO
— vincent dsouza (@vinndz_TNIE) July 30, 2022
ಕರಾವಳಿಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆಯಿಂದ ಪಾಂಡೇಶ್ವರ- ಶಿವನಗರ, ಬಿಜೈ, ಸುಭಾಷ್‌ನಗರ ಸೇರಿದಂತೆ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ, ಉಳ್ಳಾಲ, ಮುಲ್ಕಿ ಮತ್ತು ಮೂಡುಬಿದಿರೆ ವ್ಯಾಪ್ತಿಯ ಮಂಗಳೂರು ಕಂದಾಯ ಉಪ ವಿಭಾಗದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ರಜೆ ಘೋಷಿಸಿದ್ದರು.
Karnataka | Rain with thunderstorms and lightning in Mangaluru city.
Holiday has been declared throughout Mangaluru, considering the safety of children: Rajendra KV, Deputy Commissioner, Dakshina Kannada pic.twitter.com/VRmhMjyk8O
— ANI (@ANI) July 30, 2022
ಇದನ್ನೂ ಓದಿ: Heavy Rain: ಮಂಗಳೂರಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ಇಂದು ಶಾಲೆಗೆ ರಜೆ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ
ಇಂದಿನಿಂದ ಆಗಸ್ಟ್ 2ರವರೆಗೆ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಹಾಗೇ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲೂ ಮಳೆ ಹೆಚ್ಚಾಗುತ್ತಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಇಂದು ‘ಹಳದಿ ಅಲರ್ಟ್’ ಘೋಷಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕಲಬುರ್ಗಿ, ಬೀದರ್, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯಲ್ಲಿ ಇನ್ನೂ 5 ದಿನ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಆ. 2ರವರೆಗೂ ಭಾರೀ ಮಳೆ; ಈ 7 ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಬಿಹಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಪೂರ್ವ ಉತ್ತರ ಪ್ರದೇಶ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಒಡಿಶಾ, ರಾಯಲಸೀಮಾ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ವಾಯುವ್ಯ ಭಾರತದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆಯಾಗಿದೆ ಮತ್ತು ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.