Karnataka Rain: ಬೆಂಗಳೂರು, ಮಲೆನಾಡು ಸೇರಿ ಹಲವೆಡೆ ಇನ್ನೆರಡು ದಿನ ವ್ಯಾಪಕ ಮಳೆ

Bengaluru Weather Today: ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನ. 24ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

Karnataka Rain: ಬೆಂಗಳೂರು, ಮಲೆನಾಡು ಸೇರಿ ಹಲವೆಡೆ ಇನ್ನೆರಡು ದಿನ ವ್ಯಾಪಕ ಮಳೆ
ಸಂಗ್ರಹ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 23, 2022 | 6:11 AM

Bangalore Rains: ಒಂದೆಡೆ ಬೆಂಗಳೂರಿನಲ್ಲಿ ವಿಪರೀತ ಚಳಿಯಾಗಿದೆ. ಇನ್ನೊಂದೆಡೆ ಮಳೆಯ ಅಬ್ಬರವೂ ಶುರುವಾಗಿದೆ. ಇಂದು ಮತ್ತು ನಾಳೆ ಬೆಂಗಳೂರು (Bengaluru Rain), ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ (Rain in Karnataka) ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನ. 24ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಭಾರೀ ಮಳೆಯಿಂದಾಗಿ ಇನ್ನೆರಡು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ.

ಇದನ್ನೂ ಓದಿ: Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನಾಳೆಯಿಂದ ಭಾರೀ ಮಳೆ

ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಲ್ಲೇ ಅತಿ ಈ ನವೆಂಬರ್​​ನಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಕನಿಷ್ಠ 13.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉದ್ಯಾನನಗರಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 13.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 12.5 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಈಗಾಗಲೇ ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದರ ಮಧ್ಯೆ ಈಗ ಮತ್ತೆ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಂಜು ಕೂಡ ಸುರಿಯುತ್ತಿದೆ.

ಇದನ್ನೂ ಓದಿ:Bangalore Weather: ಬೆಂಗಳೂರಿನಲ್ಲಿ ಮೈ ಕೊರೆವ ಚಳಿಯ ಜೊತೆ ತುಂತುರು ಮಳೆ; 10 ವರ್ಷದಲ್ಲೇ ಕಡಿಮೆ ತಾಪಮಾನ ದಾಖಲು

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರಾವಳಿ ಆಂಧ್ರ ಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡು, ಕೇರಳ, ಮಾಹೆಯಲ್ಲಿ ಕೂಡ ಭಾರೀ ಮಳೆಯಾಗುವ ಸಂಭವವಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ