Karnataka Rain: ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದುವರೆದ ಮಳೆ; ನಾಳೆಯಿಂದ ರಾಜ್ಯಾದ್ಯಂತ ವರುಣನ ಆರ್ಭಟ ಹೆಚ್ಚಳ
Karnataka Weather Today: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಜುಲೈ 27ರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ.
Monsoon 2022: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ಬಹುತೇಕ ಕಡೆ ಮಳೆಯ ಆರ್ಭಟ (Heavy Rainfall) ಕೊಂಚ ಕಡಿಮೆಯಾಗಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಜುಲೈ 27ರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ.
ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತುಸು ದುರ್ಬಲಗೊಂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ಒಣ ಹವೆ ಇರಲಿದ್ದು, ಮಲೆನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜಲಾವೃತಗೊಂಡಿದ್ದ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.
ಇದನ್ನೂ ಓದಿ: Monsoon Diet: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಣ್ಣುಗಳಿವು
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮುಂತಾದ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಮುಂದಿನ 2 ದಿನ ಮಳೆಯ ವಾತಾವರಣ ಇರುವ ಕಾರಣಕ್ಕೆ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆ ಆಗುವುದರಿಂದ ಈ ಭಾಗದ ಸಮುದ್ರ ತೀರದಲ್ಲಿ ಗಾಳಿಯ ವೇಗ ಸಾಮಾನ್ಯವಾಗಿರಲಿದೆ. ಸೆಖೆಯ ವಾತಾವರಣ ನಿರ್ಮಾಣವಾಗುವ ನಿರೀಕ್ಷೆ ಇದ್ದು, ಆಗಾಗ ಮಳೆ ಸುರಿಯಲಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಜುಲೈ 27 ರಿಂದ ಭಾರತದ ಉತ್ತರ ಭಾಗಗಳಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ. ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಛತ್ತೀಸ್‌ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ, ಕೊಂಕಣ ಮತ್ತು ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಪಶ್ಚಿಮ ರಾಜಸ್ಥಾನ, ಒಡಿಶಾ, ತಮಿಳುನಾಡು, ಪೂರ್ವ ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಕರ್ನಾಟಕದ ದಕ್ಷಿಣ ಒಳಭಾಗಗಳು, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ಮತ್ತು ಪಂಜಾಬ್‌ನಲ್ಲಿ ಹೆಚ್ಚು ಮಳೆಯಾಗಿದೆ.
ಇಂದು ಡೆಹ್ರಾಡೂನ್, ಉತ್ತರಕಾಶಿ, ಬಾಗೇಶ್ವರ ಸೇರಿ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನೈನಿತಾಲ್, ಚಂಪಾವತ್, ಉಧಮ್ಸಿಂಗ್ನಗರದಲ್ಲಿ ಭಾರೀ ಮಳೆಯಾಗುವ ಸೂಚನೆಯಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಮಧ್ಯಪ್ರದೇಶದ 52 ಜಿಲ್ಲೆಗಳ ಪೈಕಿ 8 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. 16 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rain: ಭಾರೀ ಮಳೆಯಿಂದ ಬೀದರ್ನ ಶಾಲೆಗಳಿಗೆ ರಜೆ; ಬೆಂಗಳೂರಿನಲ್ಲಿ ಹಳದಿ ಅಲರ್ಟ್ ಘೋಷಣೆ
ಪಶ್ಚಿಮ ಹಿಮಾಲಯ ಪ್ರದೇಶ, ಈಶಾನ್ಯ ಭಾರತ, ರಾಜಸ್ಥಾನ, ಗುಜರಾತ್ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಕೊಂಕಣ, ಗೋವಾ, ತೆಲಂಗಾಣ ಮತ್ತು ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಬಿಹಾರ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ವಿದರ್ಭ, ಛತ್ತೀಸ್‌ಗಢ, ಕರಾವಳಿ ಆಂಧ್ರ ಪ್ರದೇಶ, ಒಡಿಶಾ, ಪೂರ್ವ ಉತ್ತರ ಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.