Bangalore Rains: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾನುವಾರ ಸಂಜೆಯಿಂದ ಶುರುವಾದ ವರುಣನ ಅಬ್ಬರ ಮಧ್ಯರಾತ್ರಿಯವರೆಗೂ ಮುಂದುವರೆದಿತ್ತು. ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 9ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ, ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿ ಇಂದು (ಸೋಮವಾರ) ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಬೆಂಗಳೂರಿನ ಬಸವನಗುಡಿ, ಜಯನಗರ, ಜೆಪಿ ನಗರ, ಬಿಟಿಎಂ ಲೇಔಟ್, ಹೆಚ್ಎಸ್ಆರ್ ಲೇಔಟ್, ರಾಜಾಜಿನಗರ, ಬನಶಂಕರಿ, ಆರ್ಆರ್ ನಗರ, ಕೆಂಗೇರಿ, ವಿಜಯನಗರ, ಮಲ್ಲೇಶ್ವರ, ಹೆಬ್ಬಾಳ, ವೈಟ್ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವೆಡೆ ನಿನ್ನೆ ಮಳೆಯ ಅಬ್ಬರ ಜೋರಾಗಿತ್ತು. ಇನ್ನೂ 4 ದಿನ ಕರ್ನಾಟಕದಾದ್ಯಂತ ಮಳೆ (Karnataka Rain) ಹೆಚ್ಚಾಗುವ ನಿರೀಕ್ಷೆಯಿದೆ. ಇಂದಿನಿಂದ 4 ದಿನ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಕರಾವಳಿ ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ವರುಣನ ಆರ್ಭಟವಿರಲಿದೆ. ಬೆಂಗಳೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
Rain rain go away ? Bangalore rains #bangalorerains #Bangalore pic.twitter.com/feRaPsJveM
— Khushverse (@khushverse) June 5, 2022
ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಬೆಂಗಳೂರು, ಕರಾವಳಿಯಲ್ಲಿ ಹೈ ಅಲರ್ಟ್
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ಇಂದು ಮಳೆ ಬಿರುಸು ಪಡೆಯುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ 4 ದಿನ ಗುಡುಗು ಸಹಿತ ಮಳೆ ಹೆಚ್ಚಾಗಲಿದೆ. ಇಂದಿನಿಂದ ಜೂನ್ 9ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ (Bengaluru Rain), ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ಇದನ್ನೂ ಓದಿ: Karnataka Rain: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಬೆಂಗಳೂರು, ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಇಂದು ಗಂಟೆಗೆ 30-40 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕದ ಹಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಈಗಾಗಲೇ ಮೇ ತಿಂಗಳಲ್ಲಿ ಸಾಕಷ್ಟು ಪ್ರಮಾಣದ ಅಕಾಲಿಕ ಮಳೆಯಾಗಿದೆ. ಮೇ 15-21ರ ನಡುವೆ ರಾಜ್ಯದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 400ಕ್ಕೂ ಹೆಚ್ಚು ಪ್ರಾಣಿಗಳು ಸಹ ಪ್ರಾಣ ಕಳೆದುಕೊಂಡಿವೆ. 4,500ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಅಕಾಲಿಕ ಮಳೆಯಿಂದಾಗಿ 7,010 ಹೆಕ್ಟೇರ್ ಕೃಷಿ ಭೂಮಿ ಮತ್ತು 5,736 ಹೆಕ್ಟೇರ್ ತೋಟಗಾರಿಕೆ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:16 am, Mon, 6 June 22