Bangalore Rains: ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದೆ. ಬೆಂಗಳೂರಿನ (Bengaluru Rain) ಜನರು ಇನ್ನೂ 3 ದಿನಗಳ ಕಾಲ ಮಳೆ ಕಾಟವನ್ನು ಅನುಭವಿಸಬೇಕಾಗುತ್ತದೆ. ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ (Karnataka Rains) ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ. 18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್ (Yellow Alert) ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಭಾರೀ ಮಳೆಯಾಗಲಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರವರೆಗೆ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆಯ ಬಳಿ ಮಳೆಯ ಅಬ್ಬರ ಹೆಚ್ಚುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ: ರಾಜ್ಯ ಸರ್ಕಾರದಿಂದ 124 ಕೋಟಿ ಅನುದಾನ ಬಿಡುಗಡೆ
ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆ.ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ತುಮಕೂರು, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಹಳದಿ’ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ, ಮಲೆನಾಡಿಗೆ ಇಂದು ಹಳದಿ ಅಲರ್ಟ್; ಉತ್ತರ ಕರ್ನಾಟಕದಲ್ಲೂ ಮಳೆಯ ಅಬ್ಬರ
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಸೇರಿ ಸುಮಾರು 15 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಕೊಂಕಣ ಮತ್ತು ಗೋವಾದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ವಿದರ್ಭ, ಛತ್ತೀಸ್ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಜಾರ್ಖಂಡ್, ಗುಜರಾತ್, ಮಧ್ಯ ಮಹಾರಾಷ್ಟ್ರ, ಮರಾಠವಾಡದಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.