Bengaluru Rain: ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ (Karnataka Rain) ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇನ್ನೂ 3 ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲೂ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಮಳೆಯ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 24ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಭಾರೀ ಮಳೆಯಾಗುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
Fairly widespread/Widespread light/moderate rain with isolated heavy falls & thunderstorm/lightning very likely over Tamil Nadu and Kerala during 21st-23rd October, 2022. Isolated very heavy rainfall also very likely over Tamil Nadu on 21st October, 2022. pic.twitter.com/6Ac2WdsD32
— India Meteorological Department (@Indiametdept) October 21, 2022
ಇಂದು ಕೂಡ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲೂ ವರುಣನ ಆರ್ಭಟ ಹೆಚ್ಚಾಗಲಿದೆ. ಇನ್ನೂ 3 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Karnataka Rain: ಬೆಂಗಳೂರು, ಶಿವಮೊಗ್ಗ, ಹಾಸನ ಸೇರಿ ಈ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ
ಬೆಂಗಳೂರಿನಲ್ಲಿ ಈ ವರ್ಷ ಬೆಂಗಳೂರು 1,706 ಮಿಮೀ ದಾಖಲೆಯ ಮಳೆಯಾಗಿದೆ. ಈ ಮೂಲಕ ಬೆಂಗಳೂರಿನ ಮಳೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2017ರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1,696 ಮಿಮೀ ಮಳೆಯಾಗಿತ್ತು.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕವಾದ ಬೀಳುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಯಾನಂ, ರಾಯಲಸೀಮಾದಲ್ಲಿ ಚದುರಿದ ಮಳೆಯಾಗುವ ಸಂಭವವಿದೆ. ಒಡಿಶಾ, ಕೊಂಕಣ-ಗೋವಾ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.