AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Alert: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು,ಸ ಆಧಾರಣ ಮಳೆಯಾಗುವ ಸಾಧ್ಯತೆ ಇದೆ. ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಿದೆ.

Karnataka Rain Alert: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ
ಮಳೆImage Credit source: The Hindusthan Gazette
ನಯನಾ ರಾಜೀವ್
|

Updated on: Jan 09, 2024 | 7:27 AM

Share

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು,ಸ ಆಧಾರಣ ಮಳೆಯಾಗುವ ಸಾಧ್ಯತೆ ಇದೆ. ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ತಿಂಗಳು ವಾಡಿಕೆಗಿಂತ ಶೇ.70ರಷ್ಟು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ 7.3 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಪಣಂಬೂರು, ತಾಳಗುಪ್ಪ, ಅಂಕೋಲಾ, ಕೊಪ್ಪದಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್​, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ

ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 24.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?