ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು,ಸ ಆಧಾರಣ ಮಳೆಯಾಗುವ ಸಾಧ್ಯತೆ ಇದೆ. ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ತಿಂಗಳು ವಾಡಿಕೆಗಿಂತ ಶೇ.70ರಷ್ಟು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ 7.3 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಪಣಂಬೂರು, ತಾಳಗುಪ್ಪ, ಅಂಕೋಲಾ, ಕೊಪ್ಪದಲ್ಲಿ ಮಳೆಯಾಗಿದೆ.
ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ
ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ