Karnataka Rain: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ

|

Updated on: Apr 05, 2023 | 7:31 AM

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳದಿಂದ ತತ್ತರಿಸಿದ್ದ ಬೆಂಗಳೂರಿಗೆ ವರುಣ ಕೃಪೆ ತೋರಿದ್ದಾನೆ, ಮಂಗಳವಾರ ನಗರದ ಹಲವೆಡೆ ಮಳೆಯಾಗಿದೆ.

Karnataka Rain: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ
ಮಳೆ
Image Credit source: Freepik
Follow us on

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳದಿಂದ ತತ್ತರಿಸಿದ್ದ ಬೆಂಗಳೂರಿಗೆ ವರುಣ ಕೃಪೆ ತೋರಿದ್ದಾನೆ, ಮಂಗಳವಾರ ನಗರದ ಹಲವೆಡೆ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಬೇಸಿಗೆಯ ಮಳೆ ಸುರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೋಲಾರ ಹಾಗೂ ಇತರೆ ಕೆಲವು ಜಿಲ್ಲೆಗಳಲ್ಲಿ ಮಿಂಚು ಸಹಿತ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕೊಳ್ಳೇಗಾಲ, ಟಿ ನರಸೀಪುರ, ಚಾಮರಾಜನಗರ, ಬಂಡೀಪುರದಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Bengaluru Rain: ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಸುರಿಯಲಿದೆ ಭಾರಿ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಕಲಬುರಗಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದೆಹಲಿ-ಎನ್‌ಸಿಆರ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಮಳೆ, ಗುಡುಗು, ಆಲಿಕಲ್ಲು ಮತ್ತು ಮಿಂಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಇದರಿಂದ ಟ್ರಾಫಿಕ್ ದಟ್ಟಣೆ ಉಂಟಾಗಬಹುದು ಎಂದು ಎಚ್ಚರಿಸಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ