AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

Karnataka Rain: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Healthline
ನಯನಾ ರಾಜೀವ್
|

Updated on: Oct 10, 2023 | 7:28 AM

Share

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರು, ಬೇಲೂರು, ಬಾಳೆಹೊನ್ನೂರು, ಕೃಷ್ಣರಾಜಪೇಟೆ, ನಾಪೋಕ್ಲು, ಧರ್ಮಸ್ಥಳ, ಕುಣಿಗಲ್, ಜಯಪುರ, ಕಳಸ, ಶೃಂಗೇರಿ, ಕೋಲಾರ, ಕೊಟ್ಟಿಗೆಹಾರ, ಸಾಲಿಗ್ರಾಮ, ಬೆಳ್ಳೂರು, ಅರಕಲಗೂಡು, ಹೆಸರಘಟ್ಟ, ಚನ್ನಪಟ್ಟಣ, ಮಾಲೂರಿನಲ್ಲಿ ಮಳೆಯಾಗಿದೆ.

ಕಲಬುರ್ಗಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 15.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಐದಾರು ಜಿಲ್ಲೆಗಳಲ್ಲಿ ಮುಂದಿನ 3 ದಿನ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ

ಉತ್ತರ ಒಳನಾಡಿನ ವಿಜಯಪುರ, ಧಾರವಾಡ, ಗದಗ, ಕಲಬುರ್ಗಿ, ಹಾವೇರಿ, ಕೊಪ್ಪಳ, ರಾಯಚೂರು, ದಕ್ಷಿಣ ಒಳನಾಡಿನ ಚಿತ್ರದುರ್ಗ,ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಲಿದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ಮೈಸೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಮುಸುಕಿದ ವಾತಾವರಣವಿರಲಿದ್ದು, ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ 8 ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ