AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳು ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ
ಮಳೆImage Credit source: Pipa News
ನಯನಾ ರಾಜೀವ್
|

Updated on: May 18, 2023 | 7:25 AM

Share

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳು ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬುಧವಾರದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಶ್ಚಾತ್ಯ ಪ್ರಕ್ಷುಬ್ಧತೆ ಸಕ್ರಿಯವಾಗಿದೆ. ಇದರ ಪರಿಣಾಮದಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಬಲವಾದ ಗಾಳಿ ಬೀಸಿದ್ದು, ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ.

ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ತಿಳಿಯುವುದಾದರೆ, ದಕ್ಷಿಣ ಹರಿಯಾಣದಲ್ಲಿ ಲಘು ಧೂಳಿನ ಬಿರುಗಾಳಿ ಬೀಸಿದೆ. ಕರಾವಳಿ ಆಂಧ್ರಪ್ರದೇಶ, ಪೂರ್ವ ಮಧ್ಯಪ್ರದೇಶ ಮತ್ತು ಆಗ್ನೇಯ ಉತ್ತರ ಪ್ರದೇಶ ಮತ್ತು ಹರಿಯಾಣದ ಕೆಲವೆಡೆ ಲಘು ಮಳೆಯಾಗಿದೆ. ಸಿಕ್ಕಿಂ, ಕರಾವಳಿ ಒಡಿಶಾ, ಆಂತರಿಕ ತಮಿಳುನಾಡಿನ ಕೆಲವು ಭಾಗಗಳು, ದಕ್ಷಿಣ ಕರ್ನಾಟಕ, ದಕ್ಷಿಣ ಮಧ್ಯಪ್ರದೇಶ ಮತ್ತು ಗುಜರಾತ್‌ ನಲ್ಲಿ ಕೂಡ ಹಗುರದಿಂದ ಸಾಧಾರಣ ಮಳೆಯಾಗಿದೆ.

ಮತ್ತಷ್ಟು ಓದಿ: Cyclone Mocha: ಕರ್ನಾಟಕದಲ್ಲಿ ಮೋಕಾ ಚಂಡಮಾರುತ ಎಫೆಕ್ಟ್, ಇನ್ನೂ ಮೂರು ದಿನ ಭಾರೀ ಮಳೆ

ಕೇರಳ, ತಮಿಳುನಾಡು, ಈಶಾನ್ಯ ಬಿಹಾರ ಮತ್ತು ಗಿಲ್ಗಿಟ್-ಬಲಿಸ್ತಾನ್, ಮುಜಫರಾಬಾದ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದೆಹಲಿಯಲ್ಲಿ ಮುಂದಿನ 24 ಗಂಟೆಗಳ ಹವಾಮಾನ ಪರಿಸ್ಥಿತಿಯ ಬಗ್ಗೆ ತಿಳಿಯುವುದಾದರೆ, ಪಂಜಾಬ್, ಹರಿಯಾಣ, ವಾಯುವ್ಯ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಕೆಲವು ಭಾಗಗಳಲ್ಲಿ ಲಘು ಮಳೆಯೊಂದಿಗೆ ಧೂಳಿನಿಂದ ಕೂಡಿದ ಬಿರುಗಾಳಿ ಬೀಸಬಹುದು.

ಇಂದು ಮತ್ತು ನಾಳೆ ಅಂದರೆ ಮೇ 19ರಂದು ದೆಹಲಿ-ಎನ್‌ಸಿಆರ್ ಜನರಿಗೆ ಮಳೆರಾಯನ ದರ್ಶನದಿಂದ ತಂಪಾದ ವಾತವಾರಣ ಸಿಗಬಹುದು. ಮೇ 20-21 ರಂದು ಬಲವಾದ ಬಿಸಿಲು ಇರುತ್ತದೆ. ಮೇ 22 ರಂದು ಹಗಲಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 23 ರಂದು ಕೂಡ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ