AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು, ಕೋಲಾರ, ಚಾಮರಾಜನಗರ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಇಂದು ಬೆಂಗಳೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಬೆಂಗಳೂರು, ಕೋಲಾರ, ಚಾಮರಾಜನಗರ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಮಳೆImage Credit source: Healthline
ನಯನಾ ರಾಜೀವ್
|

Updated on: Apr 02, 2023 | 7:37 AM

Share

ಇಂದು ಬೆಂಗಳೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಲ್ಪಾಡು, ದೇವನಹಳ್ಳಿಯಲ್ಲಿ ಮಳೆಯಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ,ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕಲಬುರಗಿಯಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ಮುಂದಿನ 3 ದಿನ ರಾಜ್ಯಾದ್ಯಂತ ಮಳೆ ಸಾದ್ಯತೆ: ಹವಾಮಾನ ಇಲಾಖೆ

ಇನ್ನು ಚಾಮರಾಜನಗರದಲ್ಲಿ 1 ಸೆಂ. ಮೀ ಮಳೆ ಆಗಿರುವುದು ವರದಿ ಆಗಿದೆ. ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ