ಇಂದು ಬೆಂಗಳೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಲ್ಪಾಡು, ದೇವನಹಳ್ಳಿಯಲ್ಲಿ ಮಳೆಯಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ,ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕಲಬುರಗಿಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ಮುಂದಿನ 3 ದಿನ ರಾಜ್ಯಾದ್ಯಂತ ಮಳೆ ಸಾದ್ಯತೆ: ಹವಾಮಾನ ಇಲಾಖೆ
ಇನ್ನು ಚಾಮರಾಜನಗರದಲ್ಲಿ 1 ಸೆಂ. ಮೀ ಮಳೆ ಆಗಿರುವುದು ವರದಿ ಆಗಿದೆ. ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ