AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರಿನಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಳೆImage Credit source: The Economic Times
ನಯನಾ ರಾಜೀವ್
|

Updated on: Nov 22, 2023 | 7:20 AM

Share

ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಕೆಲವೇ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 22ರಿಂದ ಮಳೆ

ಬೆಂಗಳೂರಿನಲ್ಲಿ ಮಂಗಳವಾರದಿಂದಲೇ ಮೋಡಕವಿದ ವಾತಾವರಣವಿತ್ತು, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್

ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ

ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ