AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ನವೆಂಬರ್ 12ರವರೆಗೂ ಮಳೆ ಮುಂದುವರೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಉತ್ತರ ಕನ್ನಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಬೆಂಗಳೂರು ಹವಾಮಾನImage Credit source: Nandakumar(Twitter)
ನಯನಾ ರಾಜೀವ್
|

Updated on: Nov 08, 2023 | 7:28 AM

Share

ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ನವೆಂಬರ್ 12ರವರೆಗೂ ಮಳೆ ಮುಂದುವರೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಉತ್ತರ ಕನ್ನಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತೊಂಡೇಭಾವಿ, ಕೊನೇಹಳ್ಳಿ, ಹೆಬ್ಬೂರು, ಕೃಷ್ಣರಾಜಪೇಟೆ, ಹಾವೇರಿ, ರಾಮನಗರ, ರೋಣ, ಸರಗೂರು, ಬೆಂಗಳೂರು ನಗರ, ದೊಡ್ಡಬಳ್ಳಾಪುರ, ಸಾಲಿಗ್ರಾಮ, ಯುಗಟಿ, ಶಿಗ್ಗಾಂವ್, ಕೆಂಭಾವಿ, ದೇವನಹಳ್ಳಿ, ಮಾಗಡಿ, ಬೆಂಗಳೂರು ಕೆಐಎಎಲ್​ ವಿಮಾನ ನಿಲ್ದಾಣ, ಕಡೂರು, ಕೃಷ್ಣರಾಜಸಾಗರ, ಮದ್ದೂರು, ಕೊಟ್ಟೂರು, ಪಾವಗಡ, ಚಿಕ್ಕಬಳ್ಳಾಪುರ, ತುಮಕೂರು, ಹಿರಿಯೂರು,ಚಿಂತಾಮಣಿ, ಉತ್ತರಹಳ್ಳಿ, ಗೌರಿಬಿದನೂರು, ಉತ್ತರಹಳ್ಳಿ, ಚನ್ನಪಟ್ಟಣ, ಶ್ರೀರಂಗಪಟ್ಟಣ, ಗೌರಿಬಿದನೂರು, ಕುಕನೂರು, ಹಡಗಲಿ, ಯಲ್ಲಾಪುರ, ಸವಣೂರು, ತಿಪಟೂರು, ಸಿರಾ, ಮಧುಗಿರಿ, ಗುಬ್ಬಿ, ಹಡಗಲಿ, ಬಂಡೀಪುರ, ಚಾಮರಾಜನಗರ, ಹೊಸಪೇಟೆ, ಭದ್ರಾವತಿ, ಗೇರುಸೊಪ್ಪ, ಸಿದ್ದಾಪುರ, ಗಂಗಾವತಿ, ಮುನಿರಾಬಾದ್, ಗದಗ, ಬಾಗಲಕೋಟೆ, ಹನುಮನಮಟ್ಟಿ, ಕುಣಿಗಲ್, ಹರಪನಹಳ್ಳಿ, ನರಸೀಪುರ, ಕುಣಿಗಲ್, ಎನ್​ಆರ್​ಪುರ, ಕೋಣನೂರು, ಸಂತೆಬೆನ್ನೂರಿನಲ್ಲಿ ಮಳೆಯಾಗಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ದಾವಣಗೆರೆಯಲ್ಲಿ 19.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ವರುಣನ ಆರ್ಭಟ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ