Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಲ್ಲಿ ಧಾರಾಕಾರ ಮಳೆ ಸಾಧ್ಯತೆ, ಹಳದಿ ಅಲರ್ಟ್​ ಘೋಷಣೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಲ್ಲಿ ಧಾರಾಕಾರ ಮಳೆ ಸಾಧ್ಯತೆ, ಹಳದಿ ಅಲರ್ಟ್​ ಘೋಷಣೆ
ಮಳೆImage Credit source: Encyclopedia
Follow us
ನಯನಾ ರಾಜೀವ್
|

Updated on: Jun 13, 2023 | 7:35 AM

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಅದನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಮಂಗಳೂರು, ಕೊಲ್ಲೂರು, ಶಹಪುರ, ಕಾರವಾರ, ಶಿರಾಲಿ, ಜಾನ್ಮನೆ, ಕುಂದಾಪುರ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಉಡುಪಿ, ಕುರ್ಡಿ, ಮಾನ್ವಿ, ದಾವಣಗೆರೆ, ಯುಗಟಿ, ಕೊಟ್ಟಿಗೆಹಾರ, ಕೂಡ್ಲಿಗಿ, ಕೊಟ್ಟೂರು, ಮಂಕಿ, ಕುಮಟಾ, ಗೋಕರ್ಣ, ಬೇಲಿಕೇರಿ, ಅಂಕೋಲಾ, ಸಿದ್ದಾಪುರ, ಪುತ್ತೂರು, ಸುಬ್ರಹ್ಮಣ್ಯ, ಉಪ್ಪಿನಂಗಡಿ, ಭಾಲ್ಕಿ, ಹೊಸಕೋಟೆ, ಚನ್ನಗಿರಿ, ಭಾಗಮಂಡಲ, ಕಮ್ಮರಡಿ, ಚನ್ನಪಟ್ಟಣ, ಹರಪನಹಳ್ಳಿ, ಗೇರುಸೊಪ್ಪ, ಕ್ಯಾಸಲ್​ರಾಕ್, ಶಿರಹಟ್ಟಿ, ಚಿತ್ತಾಪುರ, ಚಿಂಚೋಳಿ, ಸೇಡಂ, ನಾಪೋಕ್ಲು, ವಿರಾಜಪೇಟೆ, ಕಳಸ, ಕಡೂರು, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Rains: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಇನ್ನೆಲ್ಲೆಲ್ಲಿ ಮಳೆ ಸಂಭವ, ಇಲ್ಲಿದೆ ಮಾಹಿತಿ

ಎಚ್​ಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹದೇವಪುರ ವಲಯದ ರಾಮಮೂರ್ತಿ ನಗರದಲ್ಲಿ 10 ಮಿಮೀ ಮಳೆಯಾಗಿದೆ. ರಾಜ್ಯದಲ್ಲಿ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ 71.5 ಮಿಮೀ ಮಳೆಯಾಗಿದ್ದು, ರಾಜ್ಯದಲ್ಲಿ 24 ಗಂಟೆಗಳಲ್ಲಿ ಅತಿ ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಕಳೆದ 4 ಗಂಟೆಗಳಲ್ಲಿ ತುಮಕೂರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾದ ವರದಿಯಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ